ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಯುಗಾದಿ ಹಬ್ಬದ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಮಾರ್ಚ್೨೨ ರಿಂದ ಏಪ್ರಿಲ್ ೦೧ರ ವರೆಗೆ ಶ್ರೀಶೈಲದಲ್ಲಿ ಜರಗುವ ಶ್ರೀಮಲ್ಲಿಕಾರ್ಜುನ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕ ಕೇಂದ್ರ ಸ್ಥಾನಗಳಿಂದ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವದು. ಪ್ರಯಾಣಿಕರಿಗೆ ವಿಜಯಪುರ ಕೇಂದ್ರ ಬಸ್ ನಿಲ್ದಾಣ ಹಾಗೂ ಎಲ್ಲ ಘಟಕಗಳ ನಿಲ್ದಾಣಗಳಲ್ಲಿ ಮುಂಗಡ ಟಿಕೇಟ್ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೇ ಗುಂಪಿನಿಂದ ಪ್ರಯಾಣಿಸಲು ಕನಿಷ್ಠ ೪೫ ರಿಂದ ೫೫ ಜನ ಪ್ರಯಾಣಿಕರು ಲಭ್ಯವಾದಲ್ಲಿ ದಾರಿ ಮಧ್ಯೆ ಬರುವ ಯಾತ್ರಾ ಸ್ಥಳಗಳ ದರ್ಶನ ಮಾಡಿಸಲಾಗುದು. ಉಚಿತ ಅನ್ನಸಂತರ್ಪಣೆ ಕೇಂದ್ರಗಳಲ್ಲಿ ಊಟಕ್ಕಾಗಿ ಕಾಲಾವಕಾಶ ಕೊಡಲಾಗುವುದು. ಘಟಕ ಕೇಂದ್ರ ಸ್ಥಾನದಿಂದ ಹೆಚ್ಚುವರಿ ಬಸ್‌ಗಳಲ್ಲದೇ ಪ್ರಯಾಣಿಕರು ಇಚ್ಛಿಸಿದಲ್ಲಿ ಅವರ ಸ್ವಗ್ರಾಮಗಳಿಂದ ನೇರವಾಗಿ ಶ್ರೀಶೈಲಕ್ಕೆ ಸಾರಿಗೆ ವ್ಯವಸ್ಥೆ ಒದಗಿಸಲಾಗುವುದು. ಪ್ರಯಾಣಿಕರು ಮಂತ್ರಾಲಯ ಹಾಗೂ ಮಹಾನಂದಿ ದರ್ಶನ ಮಾಡಲು ಇಚ್ಛಿಸಿದಲ್ಲಿ ಈ ಸ್ಥಳಗಳಿಗೆ ತಗಲುವ ಪ್ರಯಾಣ ದರವನ್ನು ಪಾವತಿಸಿದಲ್ಲಿ ಮಂತ್ರಾಲಯ ಹಾಗೂ ಮಹಾನಂದಿಗೆ ಕಾರ್ಯಾಚರಣೆ ಮಾಡಲಾಗುವುದು.
ಪ್ರಯಾಣಿಕರು ಸಾರಿಗೆ ಸೌಲಭ್ಯ ಹಾಗೂ ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಭಾಗೀಯ ವಿಜಯಪುರ ೧ನೇ ಘಟಕ ವ್ಯವಸ್ಥಾಪಕರು ಮೊಬೈಲ್ ಸಂಖ್ಯೆ: ೭೭೬೦೯೯೨೨೬೩, ವಿಜಯಪುರ-೨ನೇ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: ೭೭೬೦೯೯೨೨೬೪, ಇಂಡಿ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ:೭೭೬೦೯೯೨೨೬೫, ಸಿಂದಗಿಯ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ:೭೭೬೦೯೯೨೨೬೬, ಮುದ್ದೇಬಿಹಾಳ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: ೭೭೬೦೯೯೨೨೬೭, ತಾಳಿಕೋಟಿ ಘಟಕ ವ್ಯವಸ್ಥಾಪಕರ ಮೊ.೭೭೬೦೯೯೨೨೬೮ ಹಾಗೂ ಬಸವನ ಬಾಗೇವಾಡಿ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ:೭೭೬೦೯೯೨೨೬೯ ನಿಲ್ದಾಣಾಧಿಕಾರಿಗಳು ಕೇಂದ್ರ ಬಸ್ ನಿಲ್ದಾಣ ವಿಜಯಪುರ ದೂರವಾಣಿ ಸಂಖೆ: ೦೮೩೫೨-೨೫೧೩೪೪, ಕೇಂದ್ರ ಬಸ್ ನಿಲ್ದಾಣದ ಅಧಿಕಾರಿಗಳ ಮೊಬೈಲ್ ಸಂಖ್ಯೆ:೭೭೬೦೯೯೨೨೫೮,ವಿಜಯಪುರದ ವಿಭಾಗೀಯ ಸಾರಿಗೆ ಅಧಿಕಾರಿ ಮೊಬೈಲ್ ನಂಬರ್: ೭೭೬೦೯೯೨೨೫೨ ಹಾಗೂ ವಿಭಾಗೀಯ ತಾಂತ್ರಿಕ ಶಿಲ್ಪಿ ವಿಜಯಪುರ ಮೊ: ೭೭೬೦೯೯೨೨೫೧ಗೆ ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
