ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಚಿವರಿಗೆ ಮನವಿ
ಉದಯರಶ್ಮಿ ದಿನಪತ್ರಿಕೆ
ಚಿಕ್ಕಪಡಸಲಗಿ: ವೃಂದ ಮತ್ತು ನೇಮಕಾತಿ ನಿಯಮಗಳ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಗುರುವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಶಿಕ್ಷಣ ಸಚಿವರನ್ನು ಇಂದು ಭೇಟಿ ಮಾಡಿದ ಕನಾ೯ಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗ ಶಿಕ್ಷಕ ಸಮೂಹ ಎದುರಿಸುತ್ತಿರುವ ಹಲ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ವಿನಂತಿಸಿತು.
ರಾಜ್ಯಾದ್ಯಂತ ಶಿಕ್ಷಕರ ವೇತನ ಅನುದಾನ ಕೊರತೆಯನ್ನು ನೀಗಿಸಲು ಆಥಿ೯ಕ ಇಲಾಖೆಯೊಂದಿಗೆ ಸಂವಹನ ಸಾಧಿಸಲು ಸಚಿವರಲ್ಲಿ ಕೋರಲಾಯಿತು. ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಶಿಕ್ಷಕರ ವಲಯದ ಹತ್ತಾರು ಸಮಸ್ಯೆಗಳನ್ನು ನಿವೇದಿಸಿಕೊಂಡರು.
ಈ ಸಂದರ್ಭದಲ್ಲಿ ಗದಗ ಜಿಲ್ಲೆಯ ಸಂಘದ ಅಧ್ಯಕ್ಷ ಹಿರೇಮಠ, ಸದಸ್ಯ ಬಂಡಿ, ಅಫ್ಜಲಪುರ ತಾಲೂಕು ಅಧ್ಯಕ್ಷ ದಫೇದಾರ, ಶಿವಾನಂದ ಪೂಜಾರಿ, ಕುಣಿಗಲ್ ತಾವೂಕು ಅಧ್ಯಕ್ಷ ಗೋವಿಂದರಾಜ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

