Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ದೈಹಿಕ ಸದೃಡತೆಯೊಂದಿಗೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಿಬ್ಬಂದಿ ಜೀವನೋತ್ಸಾಹ ಕಂಡುಕೊಳ್ಳಬೇಕು ಎಂದು ಇಂಡಿ ವಿಭಾಗಾಧಿಕಾರಿ ವಿನಯಕುಮಾರ ಪಾಟೀಲ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಗುರುವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು ಅಭಿವೃದ್ಧಿ ಸಮಿತಿ ಹಾಗೂ ತಾಲ್ಲೂಕು ನಿವೃತ್ತ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕಂದಾಯ ದಿನಾಚರಣೆ ೨೦೨೫ರ ಪ್ರಯುಕ್ತ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳ ಅಭಿನಂದನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಸೇವೆಯಲ್ಲಿನ ಒತ್ತಡಗಳ ನಡುವೆಯೂ ನಾವು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಮುಖ್ಯವಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಂಡಾಗ ನಮ್ಮಲ್ಲಿ ಕಾಣುವ ಬದಲಾವಣೆ, ಉತ್ಸಾಹಗಳು ಹೊಸ ಚೈತನ್ಯಕ್ಕೆ ಕಾರಣವಾಗಬಲ್ಲದು ಎಂದರು.
ತಹಶೀಲ್ದಾರ ಪ್ರಕಾಶ ಸಿಂದಗಿ, ತಾಲ್ಲೂಕು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ.ಆರ್.ಆರ್.ನಾಯಿಕ್, ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ತಾಲ್ಲೂಕು ಕಸಾಪ ಅಧ್ಯಕ್ಷ ಜಿ.ಪಿ. ಬಿರಾದಾರ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶನ ಸದಸ್ಯ ರಾಜು ಮೆಟಗಾರ ಮಾತನಾಡಿದರು.
ಜಿಲ್ಲಾ ಮಟ್ಟದ ಕ್ರೀಡಾಕೂಟದ ೧೦೦, ೪೦೦ ಮೀ.ಗಳ ಓಟ, ರೀಲೆ, ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನದ ಪಡೆದ ಮಹಾದೇವಿ ಅಳ್ಳೋಳ್ಳಿ, ಉದ್ದಜಿಗಿತ ಪ್ರಥಮ, ೪೦೦ಮೀ ಓಟದಲ್ಲಿ ದ್ವೀತಿಯ ೧೦೦ಮೀ.ರಲ್ಲಿ ತೃತೀಯ ಸ್ಥಾನ ಪಡೆದ ಅಬುಲ್‌ಕಲಾಂ ಮೋಮಿನ್, ಸಿದ್ಧು ನಾಯ್ಕೋಡಿ ಮಾತನಾಡಿದರು. ನಂತರ ಅಮಸಿದ್ಧ ದಳವಾಯಿ, ರಾಜು ಕಂಠಿ, ಕುಮಾರ ಅವರಾದಿ ಸಹಿತ ವಿಜೇತ ಎಲ್ಲ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಗ್ರೇಡ್-೨ ತಹಶೀಲ್ದಾರ ಎಸ್.ಎಚ್. ರಾಠೋಡ, ಉಪತಹಶೀಲ್ದಾರರಾದ ಸುರೇಶ ಮ್ಯಾಗೇರಿ, ಡಿ.ಎಸ್.ಭೋವಿ, ಗಿರಿಜಾ ಸಜ್ಜನ ಹಾಗೂ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.