ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ ವಿಜಯಪುರ ರಾಜ್ಯ ಘಟಕವು ಗದಗ ನಗರದ ಜಗದ್ಗುರು ತೋಂಟದಾರ್ಯ ಮಠದ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಯನ್ನು ಆಲಮೇಲ ತಾಲೂಕಿನ ಬಮ್ಮನಹಳ್ಳಿ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಆಲಮೇಲ ಪಟ್ಟಣದ ನಿವಾಸಿ ಎಸ್. ಗೀತಾ ಅವರಿಗೆ ನೀಡಿ ಗೌರವಿಸಲಾಯಿತು.
ಪ್ರಶಸ್ತಿಯನ್ನು ಅವರ ಶೈಕ್ಷಣಿಕ ಕಾರ್ಯ ವೈಖರಿಗಳು ಗುರ್ತಿಸಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಈ ಸಮಾರಂಭದಲ್ಲಿ ಗದಗ ತೋಂಟದಾರ್ಯ ಸಂಸ್ಥಾನ ಮಠದ ಡಾ.ಸಿದ್ಧರಾಮ ಮಹಾಸ್ವಾಮಿಗಳು, ಗದಗ ಈಶ್ವರೀ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ ಜಯಂತಿ ಅಕ್ಕನವರು, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷ ನಾಗಲಕ್ಷ್ಮೀ ಚೌಧರಿ, ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ, ಸಾಹಿತಿ ಶಂಕರ ಬೈಚಬಾಳ, ಕಮಲಾ ಮುರಾಳ, ಸಿ.ಎನ್.ಶ್ರೀಧರ, ಆರ್.ಎಸ್.ಬುರಡಿ, ರುದ್ರಪ್ಪ ಹುರಳಿ, ಸ್ನೇಹಾ ಡಾ.ಆರುಂಧತಿ ಕುಲಕರ್ಣಿ ಸೇರಿದಂತೆ ಅನೇಕರಿದ್ದರು.