ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ವಿಜಯಪುರ ಮಿಲಿಟರಿ ಬಾಲಕರ ವಸತಿ ನಿಲಯದ ೨೦೨೫-೨೬ನೇ ಸಾಲಿನ ಪ್ರವೇಶಕ್ಕೆ ೬ನೇ ತರಗತಿ ಯಿಂದ ೧೦ನೇ ತರಗತಿ ಹಾಗೂ ಪಿಯುಸಿ ಮತ್ತು ಡಿಪ್ಲೋಮಾ ವ್ಯಾಸಾಂಗಕ್ಕಾಗಿ ಹಾಲಿ ಮತ್ತು ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಯೊಂದಿಗೆ ಮೇ ೧೫ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಹಾಗೂ ೯೪೧೧೫೬೧೮೮೫ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
