ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ರಾಷ್ಟ್ರೀಯ ಹೆದ್ದಾರಿ 218 ರ ಯುಕೆಪಿ ಹತ್ತಿರ ಕೃಷ್ಣಾ ನದಿ ಸೇತುವೆ ಮೇಲೆ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮಶೇಖರ ಅಶೋಕ ಮಾಲಗಿತ್ತಿ (30) ಮೃತ ಸವಾರ. ಬೀಳಗಿ ಕಡೆಯಿಂದ ಕೊಲ್ಹಾರ ಮೂಲಕ ಗಣಿ ಗ್ರಾಮಕ್ಕೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
