ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ರಾಷ್ಟ್ರೀಯ ಹೆದ್ದಾರಿ 218 ರ ರೋಣಿಹಾಳ ಕ್ರಾಸ್ ಸಮೀಪ ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ರೋಣಿಹಾಳ ಗ್ರಾಮದ ಮನೋಹರ ಕಟ್ಟಿಮನಿ ಯವರಿಗೆ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳಕ್ಕೆ ದೌಡಾಯಿಸಿದ ಕೊಲ್ಹಾರ 108 ಅಂಬುಲೆನ್ಸ್ ಸಿಬ್ಬಂದಿ ಅಡವಯ್ಯಾ ಹಿರೇಮಠ ಸುಖದೇವ ಕಾಳೆ, ವಿಜಯಪುರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
