Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಿಂ.ಬಸವಲಿಂಗ ಮರುಳಸಿದ್ದ ಶ್ರೀಗಳ ಅಮೃತ ಶಿಲಾಮೂರ್ತಿ ಮೆರವಣಿಗೆ
(ರಾಜ್ಯ ) ಜಿಲ್ಲೆ

ಲಿಂ.ಬಸವಲಿಂಗ ಮರುಳಸಿದ್ದ ಶ್ರೀಗಳ ಅಮೃತ ಶಿಲಾಮೂರ್ತಿ ಮೆರವಣಿಗೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ಗ್ರಾಮದ ಗುರುಮರುಳಾರಾಧ್ಯರ ಹಿರೇಮಠದಲ್ಲಿ ಪ್ರತಿಷ್ಠಾಪಿಸಲು ಉದ್ಧೇಶಿಸಿರುವ ಲಿಂ.ಬಸವಲಿಂಗ ಮರುಳಸಿದ್ದ ಶಿವಾಚಾರ್ಯರ ಅಮೃತ ಶಿಲಾಮೂರ್ತಿಯನ್ನು ಶ್ರೀ ಯಲ್ಲಾಲಿಂಗೇಶ್ವರ ಮಹಾಮಠದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ತಂದು ಗಂಗಸ್ಥಳದೊಂದಿಗೆ ಹಿರೇಮಠಕ್ಕೆ ತರಲಾಯಿತು.
ಕಲಕೇರಿಯ ಪಂಚರಂಗಿ ಸಂಸ್ಥಾನ ಗದ್ದುಗೆಮಠದ ಮಡಿವಾಳೇಶ್ವರ ಶ್ರೀಗಳು, ನಾವದಗಿ ಪರ್ವತೇಶ್ವರ ಸಂಸ್ಥಾನ ಬೃಹನ್ಮಠದ ರಾಜಗುರು ರಾಜೇಂದ್ರ ಒಡೆಯರ್ ಶ್ರೀಗಳು, ದೇವರಹಿಪ್ಪರಗಿ ಆವುಗೇಶ್ವರ ತಪೋಧಾಮದ ಶಿವಯೋಗಿ ಸ್ವಾಮಿಗಳು ಮತ್ತು ಕಲಕೇರಿ ಹಿರೇಮಠದ ಸಿದ್ಧರಾಮ ಶ್ರೀಗಳು ಬಸವಲಿಂಗ ಮರುಳಸಿದ್ಧ ಶಿವಾಚಾರ್ಯರ ಅಮೃತ ಶಿಲಾಮೂರ್ತಿಗೆ ಪೂಜೆ ಸಲ್ಲಿಸಿ ಧ್ವಜಸಂಕೇತ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಸುಮಾರು ೧೦೦೧ ಸುಮಂಗಲೆಯರ ಪೂರ್ಣಕುಂಭ, ಕಳಸಾರುತಿಯೊಂದಿಗೆ, ಸಕಲ ವಾದ್ಯಮೇಳ, ಡೊಳ್ಳುಕುಣಿತದೊಂದಿಗೆ ನಡೆದ ಮೆರವಣಿಗೆಯುದ್ಧಕ್ಕೂ ಪಂಚಾಚಾರ್ಯರ, ಬಸವಲಿಂಗ ಮರುಳಸಿದ್ಧರ ಮತ್ತು ಮರುಳಾರಾಧ್ಯರ ಜೈಕಾರ, ಜೈಘೋಷಗಳು ಮೊಳಗಿದವು, ಸುಡುಬಿಸಿಲಿನಲ್ಲಿ ಬರಿಗಾಲಲ್ಲಿ ನಡೆಯುತ್ತಿರುವ ಕುಂಭಹೊತ್ತ ಮಹಿಳೆಯರು ಮತ್ತು ಭಕ್ತ ಸಮೂಹಕ್ಕಾಗಿ ದಾರಿಯುದ್ಧಕ್ಕೂ ಟ್ಯಾಂಕರ್‌ನಿಂದ ನೀರನ್ನು ಸಿಂಪಡಿಸಲಾಯಿತು. ಮತ್ತು ಭಕ್ತರಿಗೆ ತಂಪಾದ ನೀರು, ಪಾನಕ ಮತ್ತು ಮಜ್ಜಿಗೆಯ ವ್ಯವಸ್ಥೆ ಮಾಡಲಾಯಿತು.
ನಂತರ ಶ್ರೀಮಠದಲ್ಲಿ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಯಿತು. ನಂತರ ಶ್ರೀಮಠದ ಪರವಾಗಿ ಮಠದ ಸೇವಾಧಾರಿಗಳಿಗೆ ಶ್ರೀರಕ್ಷೆ ನೀಡಿ ಗೌರವಿಸಲಾಯಿತು.
ಈ ವೇಳೆ ಮಾತನಾಡಿದ ಹಿರೇಮಠದ ಸಿದ್ಧರಾಮ ಶಿವಾಚಾರ್ಯರು ಮಠದ ಏಳ್ಗೆಯಲ್ಲಿ ತ್ರಿಮೂರ್ತಿಗಳ ಪಾತ್ರವಿದ್ದು ಅವುಗಳೆಂದರೆ ಯುವಶಕ್ತಿ ಮತ್ತು ಹಿರಿಯರ ಮಾರ್ಗದರ್ಶನ ಹಾಗೂ ಮಹಿಳೆಯ ಅಂತ:ಶಕ್ತಿ ಈ ಮೂರು ಶಕ್ತಿಗಳು ನಿಸ್ವಾರ್ಥ ಭಾವದೊಂದಿಗೆ ತನು ಮನ ಧನದಿಂದ ಸೇವೆ ಸಲ್ಲಿಸಿ ಮಠದ ಏಳ್ಗೆಯಲ್ಲಿ ತಮ್ಮ ಸಾರ್ಥಕ ಭಾವವನ್ನು ವ್ಯಕ್ತಪಡಿಸುತ್ತಿದ್ದು, ಇದು ಸಮಾಜಮುಖಿ, ಸಂಸ್ಕಾರಯುತ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಿದ ಅವರು ಭಕ್ತರ ಸಮರ್ಪಣಾ ಭಾವವನ್ನು ಕಂಡು ಸಂತುಷ್ಠರಾಗಿ ಧನ್ಯತಾಭಾವವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ, ಬಿಜೆಪಿ ಮುಖಂಡರಾದ ಪ್ರಭುಗೌಡ ಬಿರಾದಾರ, ಸಿದ್ದು ಬುಳ್ಳಾ, ಹಿರಿಯರಾದ ಶಾಂತಪ್ಪ ಪಟ್ಟಣಶೆಟ್ಟಿ, ಷಣ್ಮುಕಪ್ಪ ಝಳಕಿ ವಿದ್ಯಾನಂದ ಹಿರೇಮಠ, ಶರಣಯ್ಯ ಮಠಪತಿ, ಶಾಂತಯ್ಯ ಹಿರೇಮಠ, ದುಂಡಯ್ಯ ಚಿಕ್ಕಮಠ, ರಮೇಶ ಅಡಕಿ, ಕುಮಾರಸ್ವಾಮಿ ಜಾಲಹಳ್ಳಿಮಠ, ಬಸವರಾಜ ಜಂಬಗಿ, ಶಿವಾನಂದ ಕಾದಳ್ಳಿ, ಗುರುರಾಜ ಅಡಕಿ, ಶಾಂತಯ್ಯ ಗಣಾಚಾರಿ, ಶಾಂತಗೌಡ ಪಾಟೀಲ, ದೇವಿಂದ್ರ ಕಡಕೋಳ, ಮೋತಿಲಾಲ ಕುಲಕರ್ಣಿ, ಶಿವಾನಂದ ಗಣೇಶಮಠ ಸೇರಿದಂತೆ ಕಲಕೇರಿ ಹಾಗೂ ಸುತ್ತಮುತ್ತಲಿನ ಗಣ್ಯರು, ಮಾತೆಯರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.