ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮುದ್ದೇಬಿಹಾಳ ತಾಲೂಕಿನ ಗಡಿಸೋಮನಾಳ ಸರಕಾರಿ ಹಿರಿಯ ಪ್ರಾಥಮಿಕ (ಆಂಗ್ಲ) ಶಾಲೆಯ ಸಹ ಶಿಕ್ಷಕರಾದ ಎ.ಜಿ.ತಿಲಕ ಅವರು ಕರ್ತವ್ಯಲೋಪವೆಸಗಿರುವ ಹಿನ್ನಲೆಯಲ್ಲಿ ಶಿಸ್ತು ಪ್ರಾಧಿಕಾರಿಗಳಾದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಟಿ.ಎಸ್.ಕೋಲಾರ ಅವರು ಇವರ ವಿರುದ್ಧದ ಆರೋಪಗಳ ಇಲಾಖಾ ವಿಚಾರಣೆ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
