ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ೧೩೧ ಪರೀಕ್ಷಾ ಕೇಂದ್ರಗಳಲ್ಲಿ ಮಾ.೨೧ರಿಂದ ಏಪ್ರಿಲ್ ೦೪ರವರೆಗೆ ಎಸ್.ಎಸ್.ಎಲ್.ಸಿ.ಪರೀಕ್ಷೆ-೧ರ ಪರೀಕ್ಷೆಗಳು ಜರುಗಲಿದ್ದು, ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ಕಲಂ ೧೬೩ರ ಪ್ರಕಾರ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶದಲ್ಲಿ ಬೆಳಿಗ್ಗೆ ೯ ಗಂಟೆಯಿಮದ ಪರೀಕ್ಷೆ ಮುಕ್ತಾಯವಾಗುವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ತರುವುದು, ಬಳಸುವುದನ್ನು ನಿಷೇಧಿಸಲಾಗಿದೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಸೆಟ್‌ನ್ನು ಮಾತ್ರ ಬಳಸಬಹುದಾಗಿದೆ. ಪರೀಕ್ಷಾ ಕೇಂದ್ರದ ೨೦೦ ಮೀಟರ್ ಪ್ರದೇಶದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷೆ ಮುಕ್ತಾಯವಾಗುವರೆಗೆ ತೆರೆಯದಂತೆ ಆದೇಶಿಸಲಾಗಿದೆ.

