ವಿಜಯಪುರ: ಚಿತ್ತಾಪುರ(ಮೀಸಲು) ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಗುತ್ತಿರುವ ಜನ ಬೆಂಬಲದಿAದ ಹತಾಶರಾಗಿರುವ ಬಿಜೆಪ ಅಭ್ಯರ್ಥಿ ಮಣಿಕಂಠ ರಾಠೋಡ ಇವರು ಖರ್ಗೆ ಕುಟುಂಬವನ್ನು ಮುಗಿಸುತ್ತೆನೆ ಎಂದು ನೀಡಿರುವ ಹೇಳಿಕೆ ಖಂಡನಿಯ ಹಾಗೂ ಅಮಾನವಿಯವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಒಕ್ಕೊರಲಿಂದ ಖಂಡಿಸಿದರು.
ಸೋಮವಾರ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಮೌಲ್ಯಾಧಾರಿತ ರಾಜಕಾರಣಿಯಾಗಿರುವ ಮಲ್ಲಿಕಾರ್ಜುನ ಖರ್ಗೆಯವರು ಕಳೆದ ಸುಮಾರು ೫೦ ವರ್ಷಗಳ ಅಧಿಕ ಕಾಲ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಶಾಸಕರಾಗಿ, ಸಚಿವರಾಗಿ ಕೇಂದ್ರ ಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ತಮ್ಮ ರಾಜಕೀಯ ಜೀವನದಲ್ಲಿ ಯಾರಿಗೂ ಅನುಚಿತವಾಗಿ ನಡೆದುಕೊಂಡಿಲ್ಲ ಎಂದರು.
ಬಿಜೆಪಿ ಪಕ್ಷದವರು ದಲಿತರು, ಅಲ್ಪ ಸಂಖ್ಯಾತರು, ಬಡವರನ್ನು ಗುರಿಯಾಗಿಸಿಕೊಂಡು ಸಂವಿಧಾನ ವಿರೋಧ ಕೃತ್ಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ದಲಿತ ಮುಖಂಡರಾದ ಡಾ. ಜೆ.ಪರಮೇಶ್ವರ ಅವರಿಗೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದು, ಈಗ ಖರ್ಗೆ ಕುಟುಂಬದ ಹತ್ಯೆಗೆ ಸಂಚು, ಈ ರೀತಿಯಾಗಿ ದಲಿತರನ್ನೇ ಟಾರ್ಗೆಟ್ ಮಾಡುತ್ತಿರುವುದು ಖಂಡನೀಯ ಎಂದರು.
ಖರ್ಗೆಜಿಯವರ ಕುಟುಂಬದ ಹತ್ಯೆಗೆ ಸಂಚು ರೂಪಿಸಿರುವ ಚಿತ್ತಾಪುರ ಕ್ಷೇತ್ರದ ಮಣಿಕಂಠ ರಾಠೋಡರನ್ನು ಬಂಧಿಸಬೇಕು. ಮತ್ತು ಬಿಜೆಪಿ ಪಕ್ಷ ಅವರನ್ನು ಪಕ್ಷದಿಂದ ಹೊರ ಹಾಕಬೇಕು ಎಂದು ಆಗ್ರಹಿಸಿದರು.
ಈ ಎಲ್ಲ ಬೆಳವಣಿಗೆಗಳು ನಡೆದರೂ ಬಿಜೆಪಿ ಮುಖಂಡರು ಮೌನ ತಾಳಿದ್ದು ನೋಡಿದರೆ ಈ ಕೃತ್ಯದ ಹಿಂದ ಪರೋಕ್ಷವಾಗಿ ಬಿಜೆಪಿ ಮುಖಂಡರ ಬೆಂಬಲ ಇದೆ ಅನ್ನೋ ಸಂಶಯ ಕಾಡುತ್ತಿದೆ. ಬಿಜೆಪ ಪಕ್ಷದ ದುರಾಡಳಿತ, ಭ್ರಷ್ಟಾಚಾರ ಹಾಗೂ ಕೊಮುವಾದಿತನ, ಕೊಲೆ ಬೆದರಿಕೆ ೪೦% ಸರಕಾರಕ್ಕೆ ಈ ರಾಜ್ಯದ ಹಾಗು ಈ ಜಿಲ್ಲೆಯ ಜನ ತಕ್ಕ ಪಾಠ ಕಲಿಸುತ್ತಾರೆ. ಮುಂದಿನ ಪ್ರಗತಿ ಮತ್ತು ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಜನರು ಅಧಿಕಾರಕ್ಕೆ ತರಲು ಉತ್ಸುಕರಾಗಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ರಾಜು ಆಲಗೂರ, ಜಿಲ್ಲಾ ಕಾಂಗ್ರೆಸ ವಕ್ತಾರ ಸುನೀಲ ಉಕ್ಕಲಿ, ಕೆಪಿಸಿಸಿ ಸದಸ್ಯ ಚಂದ್ರಶೇಖರ ಕೊಟಬಾಗಿ, ವಿಜಯಪುರ ನಗರ ಮತಕ್ಷೇತ್ರದ ಅಭ್ಯರ್ಥಿ ಅಬ್ದುಲ್ ಹಮೀದ ಮುಶ್ರಿಫ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ ಇದ್ದರು.
ಎಐಸಿಸಿ ಅಧ್ಯಕ್ಷ ಖರ್ಗೆ ಕುಟುಂಬ ಹತ್ಯೆಗೆ ಸಂಚು; ಜಿಲ್ಲಾ ಕಾಂಗ್ರೆಸ್ ಸಮಿತಿ ಖಂಡನೆ
Related Posts
Add A Comment