ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ವಿಜಯಪುರ ತಾಲೂಕಿನ ಒಟ್ಟು ೨೯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ ೨೩ರಂದು ಆದರ್ಶ ವಿದ್ಯಾಲಯಗಳಲ್ಲಿ ೬ನೇ ತರಗತಿಯ ಪ್ರವೇಶ ಪರೀಕ್ಷೆಗಳು ಜರುಗಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಗಳಾದ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.
ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಿದ್ದಾರೆ.