ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಮತಕ್ಷೇತ್ರದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ಸಭಾ ಭವನ ದುರಸ್ತಿಗಾಗಿ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯಿಂದ ರೂ.35 ಲಕ್ಷ ಮಂಜೂರಿಸಲಾಗಿದೆ.
ಸದರಿ ಅನುದಾನದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮಾರ್ಗದಲ್ಲಿರುವ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.4 ರಿಮ್ಯಾಮಡ್ ಹೋಮ್ ಆವರಣದಲ್ಲಿ ಮೂರು ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರೂ.25 ಲಕ್ಷ ಹಾಗೂ ಶಾಲೆ ಆವರಣದಲ್ಲಿರುವ ಸಭಾ ಭವನ ದುರಸ್ತಿ ಕಾಮಗಾರಿಗೆ ರೂ.10 ಲಕ್ಷ ಅನುದಾನ ಮಂಜೂರಾಗಿದೆ ಎಂದು ನಗರ ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.