Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ

ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಜಗಜೀವನರಾಂ & ಡಾ.ಅಂಬೇಡ್ಕರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
(ರಾಜ್ಯ ) ಜಿಲ್ಲೆ

ಡಾ.ಜಗಜೀವನರಾಂ & ಡಾ.ಅಂಬೇಡ್ಕರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಬರುವ ಏಪ್ರಿಲ್ ೫ರಂದು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಹಾಗೂ ಏಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತ್ಯೋತ್ಸವ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ ೧೮ ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಬರುವ ಏಪ್ರಿಲ್ ೫ರಂದು ಡಾ. ಬಾಬು ಜಗಜೀವನರಾಂ ಅವರ ೧೧೮ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಹತ್ತಿರ ಇರುವ ಡಾ. ಬಾಬು ಜಗಜೀವನರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬೆಳಿಗ್ಗೆ ೯ ಗಂಟೆಗೆ ವಿವಿಧ ಕಲಾತಂಡಗಳೊಂದಿಗೆ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರದ ಮೆರವಣಿಗೆ ಜರುಗಲಿದೆ. ನಗರದ ವಿವಿಧ ವೃತ್ತಗಳಿಂದ ಸಾಗಿ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಯಂತಿ ಅಂಗವಾಗಿ ಸಭಾ ಕಾರ್ಯಕ್ರಮ ಆಯೋಜಿಸಲಾಗುವುದು. ಜಯಂತಿ ಕಾರ್ಯಕ್ರಮ ಅಂಗವಾಗಿ ಉಪನ್ಯ್ಯಾಸಕರಿಂದ ಡಾ. ಬಾಬು ಜಗಜೀವನರಾಂ ಅವರ ಜೀವನ ಚರಿತ್ರೆ ಹಾಗೂ ಸಾಧನೆ ಕುರಿತು ಉಪನ್ಯಾಸ, ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಓರ್ವ ಪ್ರಗತಿಪರ ರೈತನ್ನು ಗುರುತಿಸಿ ಸನ್ಮಾನ ಮಾಡಲು ತೀರ್ಮಾನಿಸಲಾಯಿತು.
ಏಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ೧೩೪ನೇ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಬುದ್ಧ ವಿಹಾರದಿಂದ ವಿವಿಧ ಕಲಾ ತಂಡಗಳೊಂದಿಗೆ ಡಾ. ಬಿ.ಆರ್ ಅಂಬೇಡ್ಕರ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದ್ದು, ಕಂದಗಲ್ಲ ಶ್ರೀ ಹನಂತರಾಯ ರಂಗ ಮಂದಿರದಲ್ಲಿ ಸಭಾ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಜಯಂತಿ ಕಾರ್ಯಕ್ರಮದಲ್ಲಿ ನುರಿತ ಉಪನ್ಯಾಸಕರೋರ್ವರಿಂದ ಉಪನ್ಯಾಸ ಏರ್ಪಡಿಸುವುದು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ನಿರ್ಧರಿಸಲಾಯಿತು. ಮಹನೀಯರ ಜೀವನಾಧಾರಿತ ನೃತ್ಯ ರೂಪಕ ಪ್ರಸ್ತುತಪಡಿಸಲು ನಿರ್ಣಯಿಸಲಾಯಿತು. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಆಯೋಜಿಸುವಂತೆಯೂ, ಆಯಾ ಜಯಂತಿ ದಿನಗಳಂದು ನಗರದಲ್ಲಿರುವ ವಿವಿಧ ವೃತ್ತಗಳಿಗೆ ದೀಪಾಲಂಕಾರ, ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ ವೇದಿಕೆ ಅಲಂಕಾರ, ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗೆಳನ್ನು ಕೈಗೊಳ್ಳುವಂತೆಯೂ, ಈ ಮಹನೀಯರ ಜಯಂತಿ ಕಾರ್ಯಕ್ರಮಗಳಿಗೆ ಎಲ್ಲ ಇಲಾಖೆಯ ಅಧಿಕಾರಿ,ಸಿಬ್ಬಂದಿಗಳು ಭಾಗವಹಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆ, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ

ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ

ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು :ಡಾ.ಭುವನೇಶ್ವರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು :ಡಾ.ಭುವನೇಶ್ವರಿ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಹೋಟೆಲ್ ಗೆ ಬೆಂಕಿ! :ಅಪಾರ ಹಾನಿ
    In (ರಾಜ್ಯ ) ಜಿಲ್ಲೆ
  • ಸನಾತನ ಹಿಂದೂ ಧರ್ಮ ವಿಶ್ವದ ಶ್ರೇಷ್ಠ ಧರ್ಮ :ದಾಮೋದರ
    In (ರಾಜ್ಯ ) ಜಿಲ್ಲೆ
  • ಬಿಸಿಲಲ್ಲಿ ಪ್ರಾಣಿ-ಪಕ್ಷಿಗಳ ದಾಹ ತಣಿಸುತ್ತಿರುವ ಪಟೇಲ್
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆಮ್ಮದಿ :ಗಣಾಚಾರಿ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಮಾದಿಗ ಸಮುದಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.