21 ಪರೀಕ್ಷಾ ಕೇಂದ್ರಗಳು, ಪರೀಕ್ಷೆ ಬರೆಯುವ 7217 ವಿಧ್ಯಾರ್ಥಿಗಳು
ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ಬರುವ ಮಾರ್ಚ್ 21 ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಕಲು ಮುಕ್ತ ಪರೀಕ್ಷೆಯಾಗಿ ನಡೆಸಲು ವಿಜಯಪುರ ಗ್ರಾಮೀಣವಲಯ, ತಿಕೋಟಾ ಹಾಗೂ ಬಬಲೇಶ್ವರ ತಾಲ್ಲೂಕಿನ 21 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಬಿಇಓ ಪ್ರಮೋದಿನಿ ಬಳೋಲಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ ಗ್ರಾಮೀಣವಲಯ ವ್ಯಾಪ್ತಿಯ 21 ಕೇಂದ್ರಗಳಲ್ಲಿ 7217 ವಿಧ್ಯಾರ್ಥಿಗಳು ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. ಪರೀಕ್ಷಾ ಕೇಂದ್ರ ಹಾಗೂ ಎಲ್ಲ ಕೊಠಡಿಗಳು ವೇಬಕಾಸ್ಟಿಂಗ್ ವ್ಯಾಪ್ತಿಗೆ ಒಳಪಟ್ಟಿದ್ದು ಸಿಸಿ ಕ್ಯಾಮರಾ ನಿಗಾ ವಹಿಸಲಿವೆ. ನಕಲು ತಡೆಗೆ ವೆಬ್ ಕಾಸ್ಟಿಂಗ್ ವೀಕ್ಷಣೆಯನ್ನು ಜಿಲ್ಲಾ ಪಂಚಾಯತಿ ಕಛೇರಿ, ಡಿಡಿಪಿಐ ಕಛೇರಿ, ಬಿಇಓ ಕಛೇರಿಗಲ್ಲಿ ಅಧಿಕಾರಿ ವರ್ಗ ವೀಕ್ಷಣೆ ಮಾಡುತ್ತಿರುತ್ತಾರೆ.
ಪರೀಕ್ಷಾ ಕೇಂದ್ರದ ಎರಡು ನೂರೂ ಮೀಟರ್ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿ ಪೋಲಿಸ್ ಬಂದೋಬಸ್ತ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುವಾಗ ನಕಲಿಗೆ ಸಹಕರಿಸುವವರ ಮೇಲೆ ಕಾನೂನು ಕ್ರಮ ಕೈಗೊಂಡು ಎಪ್ಐಆರ್ ದಾಖಲಿಸಲಾಗುವದು. ಫಲಿತಾಂಶ ಸುಧಾರಣೆಗೆ ಶಿಕ್ಷಕರು ವರ್ಷಪೂರ್ತಿ ಶ್ರಮ ಪಟ್ಟಿದ್ದು, ವಿಧ್ಯಾರ್ಥಿಗಳು ಆ ನಿಟ್ಟಿನಲ್ಲಿ ತಯಾರಾಗಿದ್ದಾರೆ.
ಸಾರ್ವಜನಿಕರು ಈ ಎಲ್ಲ ಅಂಶಗಳನ್ನು ಗಮಮದಲ್ಲಿರಿಸಿಕೊಂಡು ವಿಧ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವ ಸಮಯದಲ್ಲಿ ಮಕ್ಕಳಿಗೆ ಮಾನಸಿಕವಾಗಿ ತೊಂದರೆ ಕೊಡದಂತೆ ತಿಳಿಸಿದರು.
ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ಪರೀಕ್ಷೆ ಬರೆದು ಉತ್ತಮ ಅಂಕಗಳನ್ನು ಪಡೆದು ತಾಲ್ಲೂಕಿನ ಕೀರ್ತಿ ಹೆಚ್ಚಿಸಬೇಕೆಂದು ಶುಭ ಕೋರಿದರು.

