ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಹಾವೇರಿ ಜಿಲ್ಲೆಯ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಕುರಿತಾಗಿ ೦೩ ದಿನಗಳ ಕಮ್ಮಟವನ್ನು ಏಪ್ರಿಲ್ ೨೧, ೨೨ ಮತ್ತು ೨೩ ರಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಏಪ್ರಿಲ್ ೦೫ ಕೊನೆಯದಿನವಾಗಿದೆ. ೨೦ ರಿಂದ ೪೫ ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ http://karnatakasahithyaacademy.org ಮೂಲಕ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ ಕರಿಯಪ್ಪ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
