ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮಾ.೧೯ರಂದು ಸರ್ಕಾರಿ ಐಟಿಐ ಕಾಲೇಜು, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಸೆಲ್ಕೋ ಸೋಲಾರ್ ಪ್ರೈವೇಟ್ ಲಿಮಿಟೆಡ್ ಇವರ ಸಹಯೋಗದಲ್ಲಿ, ಸೌರ ತಂತ್ರಜ್ಞಾನ ಅನುಷ್ಠಾನ ಮತ್ತು ಆವಿಷ್ಕಾರ ಕುರಿತು ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ರಮೇಶ ದೇಸಾಯಿ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧಿಕಾರಿ ರವಿ, ಬಾಗಲಕೋಟೆಯ ಭಾರತೀಯ ವಿಕಾಸ ಟ್ರಸ್ಟ್ನ ಶಿವಕುಮಾರ ಕೆ, ವಿಜಯಪುರ ಸೆಲ್ಕೋ ಸೋಲಾರ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕರಾದ ಮಲ್ಲೇಶ ಕುಂಬಾರ, ಸರ್ಕಾರಿ ಐಟಿಐ ಕಾಲೇಜಿನ ತರಬೇತಿ ಅಧಿಕಾರಿಗಳಾದ ರವಿ ಖೇಡಗಿ, ಡಿ.ಜಿ ಅಳ್ಳಿಕಟ್ಟಿ, ಸುವರ್ಣಾ ಕತ್ನಳ್ಳಿ, ಸಿ.ಎ ಪಾಟೀಲ, ರೇಶ್ಮಾ ಪಿಸೆ ಹಾಗೂ ಐಟಿಐ ಕಾಲೇಜು ವಿದ್ಯಾರ್ಥಿಗಳು ಬಾಗವಹಿಸಿದ್ದರು.

