ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸಿಂದಗಿ ಶ್ರೀ ಗಜಾನನ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ವಿವೇಕಾನಂದ ಕುಲಕರ್ಣಿ ಹಾಗೂ ಉಪಾಧ್ಯಕ್ಷರಾಗಿ ಸಂಜೀವ್ ಪೋತದಾರ ಎಲ್ಲ ಸದಸ್ಯರ ಒಪ್ಪಿಗೆ ಮೇರೆಗೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಚುನಾವಣಾ ಅಧಿಕಾರಿ ಎಂ ಎಸ್ ರಾಠೋಡ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವಧೂತ ಜೋಶಿ ತಿಳಸಿದ್ದಾರೆ.
ಇದೇ ಸಂದರ್ಭದಲ್ಲಿ ಬಿ.ಜಿ.ಕುಲಕರ್ಣಿ, ಗಿರೀಶ್ ಕುಲಕರ್ಣಿ, ಎ.ಕೆ.ಕುಲಕರ್ಣಿ, ಚಿಂತಾಮಣಿ ಕುಲಕರ್ಣಿ, ಎಂ.ಎ.ಸಿಂದಗೇರಿ, ಆರ್.ಡಿ.ಕುಲಕರ್ಣಿ, ದಯಾನಂದ ಪತ್ತಾರ, ಶರದ ನಾಡಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

