ಉದಯರಶ್ಮಿ ದಿನಪತ್ರಿಕೆ
ಇಂಡಿ: ಪರೀಕ್ಷಾ ಕೇಂದ್ರಗಳಲ್ಲಿ ಗಾಳಿ, ಬೆಳಕು, ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಆಶಾ ಕಾರ್ಯಕರ್ತರು, ಆಸನ ವ್ಯವಸ್ಥೆ ಮಾಡಲಾಗಿದೆ. ಒಟ್ಟಾರೆಯಾಗಿ ಪರೀಕ್ಷೆಯನ್ನು ಪಾರದರ್ಶಕ, ಪ್ರಾಮಾಣಿಕವಾಗಿ ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ತಿಳಿಸಿದರು.
ಗುಧವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೨೧ ರಿಂದ ಏಪ್ರಿಲ್ ೪ರ ವರೆಗೆ ನಡೆಯಲಿದ್ದು, ತಾಲೂಕಿನ ೧೭ ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ನಡೆಸಲು ಎಲ್ಲಾ ರೀತಿಯ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ.
‘ಈ ಬಾರಿ ೪೯೭೬ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ೨೫೯೪ ಬಾಲಕರು, ೨೩೮೨ ಬಾಲಕಿಯರು ಹಾಗೂ ೨೨೨ ಪುನರಾವರ್ತಿತ ವಿದ್ಯಾರ್ಥಿಗಳು ಇದ್ದಾರೆ’ ಎಂದರು.
೧೭ ಪರೀಕ್ಷಾ ಕೇಂದ್ರಗಳಿಗೂ ಸಿ.ಸಿ.ಟಿ.ವಿ ಕ್ಯಾಮೆರಾ ಹಾಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ೧೭ ಪರೀಕ್ಷಾ ಕೇಂದ್ರದಲ್ಲಿ ಸಮರ್ಪಕ ಪೀಠೋಪಕರಣದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು
ಹೆಚ್ಚುವರಿ ಬಸ್ ವ್ಯವಸ್ಥೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮಯದಲ್ಲಿ ಬಸ್ಸಿನ ಅನಾನುಕೂಲ ಆಗಬಾರದು ಎನ್ನುವ ನಿಟ್ಟಿನಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ನೀಡಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗುವುದು’ ಎಂದು ಹೇಳಿದರು.
ಉತ್ತಮ ಫಲಿತಾಂಶದ ನಿರೀಕ್ಷೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಶತ ೮೦%ರಷ್ಟು ಪಡೆಯುವ ಭರವಸೆ ಇದೆ. ಆ ನಿಟ್ಟಿನಲ್ಲಿ ಪ್ರಯತ್ನ ಹಾಕಿದ್ದೇವೆ. ವೆಬ್ ಕಾಸ್ಟಿಂಗ್ ಬಗ್ಗೆ ಮಕ್ಕಳಿಗೆ ಇಡೀ ವರ್ಷ ಹೇಳಿಕೊಂಡೇ ಬಂದಿದ್ದು, ಪರೀಕ್ಷೆಗೆ ಆತ್ಮಸ್ಥೈರ್ಯ ತುಂಬಿದ್ದೇವೆ. ಎಲ್ಲದಕ್ಕೂ ಸಿದ್ಧತೆ ಆಗಿದ್ದು, ಎಲ್ಲರೂ ತಂಡವಾಗಿ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷೆಯಲ್ಲಿದ್ದೇವೆ ಎಂದು ಆಲಗೂರ ಹೇಳಿದರು.
“ಸಿಸಿ.ಟಿ.ವಿ ವೆಬ್ ಕಾಸ್ಟಿಂಗ್ ಬಗ್ಗೆ ಯಾವುದೇ ರೀತಿಯಿಂದ ಮಕ್ಕಳು ಆತಂಕ ಪಡಯಬಾರದು, ಪರೀಕ್ಷೆಯನ್ನು ಅತೀ ಸರಳವಾಗಿ ನಿರಾಂತವಾಗಿ ಬರೆಯಬೇಕು. ವೈಯಕ್ತಿಕವಾಗಿ ಹಾಗೂ ತಾಲೂಕಾಡಳಿತದ ಪರವಾಗಿ ಮಕ್ಕಳಿಗೆ ಆಲ್ ದಿ ಬೆಸ್ಟ್ ಉತ್ತಮ ಫಲಿತಾಂಶ ತನ್ನಿ.”
– ಟಿ.ಎಸ್.ಆಲಗೂರ
ಕ್ಷೇತ್ರ ಶಿಕ್ಷಣಾಧಿಕಾರಿ, ಇಂಡಿ.