ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ತಾಲೂಕಿನ ಗೆದ್ದಲಮರಿ ಬಳಿ ನಡೆದಿದೆ.
ಬಾಗಲಕೋಟೆ ಡಿಪೋ ನ ಬಸ್ ಇದಾಗಿದ್ದು ಬಸ್ಸಿನಲ್ಲಿ ೫-೬ ಜನ ಮಾತ್ರ ಪ್ರಯಾಣಿಕರಿದ್ದು ಕೆಲವರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯಗಳಾಗಿಲ್ಲ. ರಸ್ತೆಯ ಮಧ್ಯೆ ದಿಢೀರನೆ ವೃದ್ಧೆಯೊಬ್ಬಳು ಬಂದಾಗ ಆಕೆಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಅನಾಹುತ ಸಂಭವಿಸಿದೆ ಎಂದು ಕೆಎಸ್‌ಆರ್‌ಟಿಸಿ ತಾಲೂಕು ಘಟಕದ ವ್ಯವಸ್ಥಾಪಕ ಎ.ಎಚ್.ಮದಭಾವಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

