ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ ೩೧ರವರೆಗೆ ವಿಸ್ತರಿಸಲಾಗಿದೆ.
https://ssp.postmatric.karnataka.gov.inಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್https://dom.karnataka.gov.in ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ,ಮೌಲಾನಾ ಆಝಾದ ಭವನ,ಜಿಲ್ಲಾ ವಿಜ್ಞಾನ ಚಟುವಟಿಕೆ ಕೇಂದ್ರದ ಹತ್ತಿರ,ಜಿಲ್ಲಾ ಪಂಚಾಯತಿ ರಸ್ತೆ, ಕನಕದಾಸ ಬಡಾವಣೆಯಲ್ಲಿರುವ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.