Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆಯಲ್ಲಿ ತಗ್ಗಿದ ತಾಯಿ-ಶಿಶು ಮರಣ ಪ್ರಮಾಣ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆಯಲ್ಲಿ ತಗ್ಗಿದ ತಾಯಿ-ಶಿಶು ಮರಣ ಪ್ರಮಾಣ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಮಟ್ಟದ ತಾಯಿ ಮತ್ತು ಶಿಶು ಮರಣ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾಹಿತಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯಡಿಯ ಸೌಕರ್ಯಗಳು ಮತ್ತು ಗುಣಮಟ್ಟದ ಚಿಕಿತ್ಸೆ ಸೇರಿದಂತೆ ವಿವಿಧ ಆರೋಗ್ಯ ಸೌಲಭ್ಯಗಳಿಂದ ಜಿಲ್ಲೆಯಲ್ಲಿ ಸರಾಸರಿ ಪ್ರಮಾಣಕ್ಕಿಂತಲು ತಾಯಿ-ಶಿಶು ಮರಣ ಕಡಿಮೆಯಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.
ಬುಧವಾರ ನಡೆದ ಜಿಲ್ಲಾ ಮಟ್ಟದ ತಾಯಿ ಮತ್ತು ಶಿಶು ಮರಣ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಳೆದ ಮೂರು ವರ್ಷಗಳಿಗೆ ಹೋಲಿಸಿದ್ದಲ್ಲಿ ೨೦೨೪-೨೫ನೇ ಸಾಲಿನಲ್ಲಿ ತಾಯಿ ಶಿಶುಗಳ ಮರಣ ಪ್ರಮಾಣ ಕಡಿಮೆಯಾಗಿದೆ. ಸತತ ಪ್ರಯತ್ನ, ಉತ್ತಮವಾದ ಆರೋಗ್ಯ ಸೇವೆಯಿಂದಾಗಿ ಮರಣ ಪ್ರಮಾಣ ಕಡಿಮೆಯಾಗಿರುವುದಕ್ಕೆ ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಜನನವಾಗುವ ಪ್ರತಿ ಸಾವಿರ ಶಿಶುಗಳ ಪೈಕಿ ಬೇರೆ ಬೇರೆ ಕಾರಣಗಳಿಂದ ಮೃತಪಡುವ ಶೇ.೫.೭೭ ರಷ್ಟು ಪ್ರಮಾಣವಾಗಿದ್ದು, ಸತತ ಗರ್ಭೀಣಿಯರ ಆರೋಗ್ಯ ತಪಾಸಣೆ, ವೈದ್ಯರ ಕಾಳಜಿ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಯರ್ತೆರು ಹಾಗೂ ಕ್ಷೇತ್ರ ಮಟ್ಟದ ಆರೋಗ್ಯ ಸಿಬ್ಬಂದಿಗಳ ಸಹಕಾರದೊಂದಿಗೆ ಗರ್ಭೀಣಿಯರನ್ನು ಪ್ರಥಮ ತ್ರೈಮಾಸಿಕದಲ್ಲಿ ಹೆಸರು ನೊಂದಾಯಿಸಲಾಗುತ್ತದೆ. ೧೨ ರಿಂದ ೧೪ ಬಾರಿ ಅವರ ನಿಯಮಿತ ತಪಾಸಣೆಗೊಳಪಡಿಸಿ, ವಿವಿಧ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ ಉಚಿತ ಆರೋಗ್ಯ ಚಿಕಿತ್ಸೆ ನೀಡಿರುವುದರಿಂದ ತಾಯಿ-ಶಿಶು ಮರಣ ಪ್ರಮಾಣ ಕಡಿಮೆಗೊಳಿಸಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ತಾಯಿ ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಆರ್.ಸಿ.ಹೆಚ್ ಪೋರ್ಟಲ್ ಮೂಲಕ ಗರ್ಭೀಣಿಯರಿಗೆ ಕಾಲಕಾಲಕ್ಕೆ ಆರೋಗ್ಯ ಮಾಹಿತಿ ಒದಗಿಸುವುದರೊಂದಿಗೆ ತಾಯಿ ಶಿಶು ಮರಣ ತಡೆಯಲು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಅವರು ಮಾತನಾಡಿ, ಜಿಲ್ಲೆಯಲ್ಲಿ ತಾಯಿ ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಗುಣಾತ್ಮಕ ಆರೋಗ್ಯ ಸೇವೆ, ಪ್ರಸವಪೂರ್ವ ಆರೈಕೆ, ಗಂಡಾಂತರ ಗರ್ಭೀಣಿ ಹೆರಿಗೆಗಳನ್ನು ಗುರುತಗಿಸಿ ಅವರಿಗೆ ಪ್ರಸೂತಿ ತಜ್ಞ ವೈದ್ಯರಿಂದ ಆರೈಕೆ ಹಾಗೂ ಆಪ್ತಸಮಾಲೋಚನೆ ಮೂಲಕ ಶೇ.೧೦೦ ರಷ್ಟು ಹೆರಿಗೆಗಳನ್ನು ಆರೋಗ್ಯ ಸಂಸ್ಥೆಗಳಲ್ಲಿ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಕೆ.ಡಿ.ಗುಂಡಬಾವಡಿ, ಡಾ.ಎಸ್.ಎಲ್.ಲಕ್ಕಣ್ಣವರ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ವೈದ್ಯಾದಿಕಾರಿಗಳು ಉಪಸ್ಥಿತರಿದ್ದರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.