ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಜರುಗಿದ ಎಸ್.ಎಸ್.ಎಲ್.ಸಿ ಭಾಷಾ ಪರೀಕ್ಷೆಗೆ ೪೧,೨೭೬ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ೪೦,೧೮೭ ವಿದ್ಯಾರ್ಥಿಗಳು ಹಾಜರಾಗಿದ್ದು, ೧,೦೮೯ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
