ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮ ಪರೀಕ್ಷೆಗಳ ಶಿಬಿರದ ಸಮಾರೋಪ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ದೈನಂದಿನ ದಿನ ಪತ್ರಿಕೆ ಓದು ಹಾಗು ಆಧುನಿಕ ತಂತ್ರಜ್ಞಾನವನ್ನು ಮತ್ತು ಸಮಾಜದಲ್ಲಿನ ಇತ್ತೀಚಿನ ಪ್ರವೃತ್ತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಮುಂದಾಗಬೇಕು ಎಂದು ಹಿರಿಯ ಪತ್ರಕರ್ತ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ರಾಣಿ ಚನ್ನಮ್ಮ ವಿವಿ ಸಿಂಡಿಕೇಟ್ ಸದಸ್ಯ ರಫೀ ಭಂಡಾರಿ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ Àಐಕ್ಯೂಎಸಿ, ಮಹಾವಿದ್ಯಾಲಯದ ಕೆರಿಯರ್‌ಗೈಡೆನ್ಸ್, ಪ್ಲೇಸ್ಮೆಂಟ್ ಸೆಲ್ ವಿಭಾಗದ ಮತ್ತು ಎಸ್ ಬಿ ವಿಸ್ಡಮ್‌ಕರಿಯರ್ ಅಕಾಡೆಮಿಯ ಸಂಯುಕ್ತಾಶ್ರಯದಲ್ಲಿ ಬಿಎ,ಬಿಎಸ್ಸಿ, ಬಿಸಿಎ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮ ಪರೀಕ್ಷೆಗಳ ೧೫ ದಿನಗಳ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ತುತ್ತಾಗಿ ದುಶ್ಚಟಕ್ಕೆ ದಾಸರಾಗುತ್ತಿದ್ದಾರೆ. ಮೊಬೈಲ್ ಶೈಕ್ಷಣಿಕ ಚಟುವಟಿಕೆಗಳಿಗೆ ಬಳಸಿಕೊಂಡು ಭವ್ಯ ಭವಿಷ್ಯ ನಿರ್ಮಿಸಿಕೊಳ್ಳಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ನಿರಂತರವಾಗಿ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು. ದೈನಂದಿನ ಆಗುಹೋಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವಿರಬೇಕು. ನಿಜವಾದ ಬಡವರು ಓದದವರು, ಯಾರು ನಿರಂತರವಾಗಿ ಓದಿ ಉತ್ತಮಜ್ಞಾನವನ್ನು ಸಂಪಾದಿಸುತ್ತಾರೆ ಉತ್ತಮಜೀವನ ನಡೆಸುತ್ತಾರೋ ಅವರೇ ನಿಜವಾದ ಶ್ರೀಮಂತರು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಓದಿ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಗೋಲ್‌ಗುಂಬಜ್ ಸಿಪಿಐ ಮಲ್ಲಯ್ಯ ಮಠಪತಿ ಮಾತನಾಡಿ, ಜೀವನದಲ್ಲಿ ಪ್ರೇರಣೆಯಾಗಿಸಿಕೊಳ್ಳಬೇಕಾದರೆ ಮೊದಲು ನಿಮ್ಮ ಹೆತ್ತ ತಂದೆ ತಾಯಿಗಳನ್ನು ಮಾದರಿಯಾಗಿಸಿಕೊಳ್ಳಿ. ಸಾಧನೆ ಎಂದರೆ ಕೇವಲ ಓದು ಬರಹ ಮಾತ್ರ ಅಲ್ಲ ಅದರ ಹೊರತಾಗಿಯೂ ನೀವು ಕಂಡಂತಹ ಯಾವುದೇ ಕ್ಷೇತ್ರದಲ್ಲಿ ಮಾಡುವ ಸಾಧನೆಯಾಗಿದೆ. ಓದಿನೊಂದಿಗೆ ಇನ್ನಿತರ ದಾರಿಗಳನ್ನು ಕಂಡುಕೊಂಡಿರಬೇಕು. ಜೀವನದಲ್ಲಿ ನಿಮ್ಮ ಸಾಧನೆಗೆ ನೀವೆ ಮಾರ್ಗಗಳನ್ನು ಕಂಡುಕೊಳ್ಳಬೇಕು. ಜೊತೆಗೆ ಓದಿನೊಂದಿಗೆ ಇತ್ತೀಚಿನ ಆಗುಹೋಗುಗಳ ಬಗ್ಗೆ ಅರಿವಿರಬೇಕು ಎಂದರು.
ಈ ಸಂದರ್ಭದಲ್ಲಿ ಎಸ್ ಬಿ ವಿಸ್ಡಮ್ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಶರಣಯ್ಯ ಭಂಡಾರಿಮಠ, ಆಡಳಿತಾಧಿಕಾರಿ ಭಾಗೇಶ ಮುರಡಿ ಮತ್ತು ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಮಾತನಾಡಿದರು.
ಈ ವೇಳೆಯಲ್ಲಿ ಮಹಾವಿದ್ಯಾಲಯದ ವಿಧ್ಯಾರ್ಥಿನಿಯರು ತಮ್ಮ ೧೫ ದಿನಗಳ ವರೆಗಿನ ಸ್ಪರ್ಧಾತ್ಮ ಪರೀಕ್ಷೆಗಳ ತರಬೇತಿ ಅನುಭವವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಉಪಪ್ರಾಚಾರ್ಯರಾದ ಡಾ.ಅನೀಲ ಬಿ. ನಾಯಕ, ಐಕ್ಯೂಎಸಿ ನಿರ್ದೇಶಕರಾದ ಡಾ.ಪಿ.ಎಸ್ ಪಾಟೀಲ, ನ್ಯಾಕ್ ಸಂಯೋಜಕ ಡಾ.ಕೆ.ಮಹೇಶಕುಮಾರ, ಡಾ.ಶ್ರೀನಿವಾಸ ದೊಡ್ಡಮನಿ ಹಾಗೂ ಮಹಾವಿದ್ಯಾಲಯದ ಕೆರಿಯರ್‌ಗೈಡೆನ್ಸ್ ಮತ್ತು ಪ್ಲೇಸ್ಮೆಂಟ್ ಸೆಲ್ ವಿಭಾಗದ ಸಂಯೋಜಕರಾದ ಡಾ.ಅಮಿತ್ ತೇರದಾಳೆ, ಪ್ರೊ.ಎಂ ಎಸ್ ಜೇವೂರ, ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಡಾ.ಪಿ.ಎಸ್ ಪಾಟೀಲ ಸ್ವಾಗತಿಸಿದರು, ಡಾ.ಉಷಾದೇವಿ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.