Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಪಘಾತ ತಡೆಗೆ ವಾಹನ ಸವಾರರು ಸಂಚಾರಿ ನಿಯಮ ಪಾಲಿಸಬೇಕು :ಡಾ.ಪಾಟೀಲ
(ರಾಜ್ಯ ) ಜಿಲ್ಲೆ

ಅಪಘಾತ ತಡೆಗೆ ವಾಹನ ಸವಾರರು ಸಂಚಾರಿ ನಿಯಮ ಪಾಲಿಸಬೇಕು :ಡಾ.ಪಾಟೀಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಪಘಾತ ಸಂಭವಿಸಿದ ಕೂಡಲೇ ಸಮೀಪದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ನಂತರ ಸಕಲ ಸೌಲಭ್ಯವಿರುವ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದಾಗ ಮಾತ್ರ ವ್ಯಕ್ತಿಯ ಜೀವ ಉಳಿಸಲು ಸಾಧ್ಯ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಗುರುವಾರ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ವತಿಯಿಂದ ಆಯೋಜಿಸಲಾದ ವಿಶ್ವ ತಲೆಗೆ ಗಾಯ ತಡೆಗಟ್ಟುವ ಜಾಗೃತ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಸ್ತೆ ಅಪಘಾತಗಳು ಬಹುತೇಕ ತಲೆಗೆ ಗಾಯವಾಗಲು ಪ್ರಮುಖ ಕಾರಣವಾಗಿವೆ. ಹೀಗಾಗಿ ವಾಹನ ಸವಾರರು ಸಂಚಾರಿ ನಿಯಮ ಪಾಲನೆ ಮಾಡಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು. ವಾಹನ ಚಾಲನೆ ಸಂದರ್ಭದಲ್ಲಿ ಮೊಬೈಲ ಬಳಸಬಾರದು. ಮದ್ಯ ಸೇವಿಸಿ ವಾಹನ ಚಲಾಯಿಸಬಾರದು. ರಸ್ತೆ ಮಧ್ಯೆ ಜಗಳವಾಡುತ್ತ ನಿಲ್ಲಬಾರದು. ಕಾರು ಮತ್ತೀತರ ಪ್ರಯಾಣೀಕರ ಹಾಗೂ ಸರಕು ಸಾಗಣೆ ವಾಹನಗಳನ್ನು ಚಲಾಯಿಸುವಾಗ ಸೀಟು ಬೆಲ್ಟ್ ನ್ನು ಕಡ್ಡಾಯವಾಗಿ ಧರಿಸುವ ಮೂಲಕ ಅಪಘಾತ ಮತ್ತು ತಲೆಗೆ ಗಾಯವಾಗುವುದನ್ನು ತಪ್ಪಿಸಬಹುದಾಗಿದೆ ಎಂದು ಅವರು ಹೇಳಿದರು.
ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತಕಿಕಿತ್ಸೆ ವಿಭಾಗದ ಸಹಪ್ರಾಧ್ಯಾಪಕ ಡಾ. ಬಸವರಾಜ ಬಡದಾಳ ಮಾತನಾಡಿ, ರಸ್ತೆ ಅಪಘಾತಗಳಲ್ಲಿ ಸುಮಾರು ಶೇ. 50 ರಷ್ಟು ಜನರಿಗೆ ತಲೆಗೆ ಪೆಟ್ಟಾಗಿ ಮೆದಳು ನಿಷ್ಕ್ರೀಯವಾಗಿ ಅಂಗವೈಕಲ್ಯ ಹೊಂದುವುದು ಅಥವಾ ಸಾವು ಸಂಭವಿಸುವ ಸಾಧ್ಯತೆಗಳಿರುತ್ತವೆ. ಉಳಿದ ಶೇ. 25 ರಷ್ಟು ಪ್ರಕರಣಗಳಲ್ಲಿ ತಲೆಗೆ ಪಟ್ಟಾಗಿ ಮೆದಳು ನಿಷ್ಕ್ರೀಯವಾಗುವುದು ಅಥವಾ ಸಾವು ಸಂಭವಿಸುತ್ತವೆ. ಇನ್ನುಳಿದ ಸುಮಾರು ಶೇ. 20ರಷ್ಟು ಪ್ರಕರಣಗಳಲ್ಲಿ ಜಗಳದ ಸಂದರ್ಭದಲ್ಲಿ ಹೊಡೆದಾಟ ಉಂಟಾಗಿ ಮೆದಳು ನಿಷ್ಕ್ರೀಯ ಅಥವಾ ಸಾವು ಸಂಭವಿಸುತ್ತವೆ. ವಿಶ್ವದಲ್ಲಿ ಪ್ರತಿದಿನ ಸುಮಾರು 50 ಮಿಲಿಯನ ಜನರು ತಲೆ ಗಾಯ ಮಾಡಿಕೊಳ್ಳುತ್ತಾರೆ. ಅದರಲ್ಲಿ 1.20 ಮಿಲಿಯನ್ ಜನರು ಸಾವನ್ನಪುತ್ತಾರೆ. ಪ್ರತಿದಿನ 45 ವಯಸ್ಸಿಗಿಂತ ಕಡಿಮೆ ವಯಸ್ಸಿನವರು 6600 ಜನ ಗಾಯಗೊಂಡರೆ ಅದರಲ್ಲಿ 3300 3300 ಜನ ಸಾವನ್ನಪ್ಪುತ್ತಾರೆ. ಅವರಲ್ಲಿ ನಮ್ಮ ಭಾರತದಲ್ಲಿ ಪ್ರತಿ ಆರು ಅಪಘಾತಗಳಲ್ಲಿ ಒಬ್ಬರು ಸಾವನ್ನಪ್ಪಿದರೆ. ಅಮೇರಿಕಾದಲ್ಲಿ ಪ್ರತಿ 200 ಜನಕ್ಕೆ ಒಬ್ಬರು ಸಾವನ್ನಪ್ಪುತ್ತಾರೆ. ಇದನ್ನು ಗಮನಿಸಿದಾಗ ನಮ್ಮ ದೇಶದಲ್ಲಿ ಅಪಘಾತ ಮತ್ತು ಸಾವುಗಳ ಪ್ರಮಾಣ ಹೆಚ್ಚು ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಘಾತಗಳ ಬಗ್ಗೆ ಮನ್ನೆಚ್ಚರಿಕೆ ವಹಿಸಬೇಕು. ರಸ್ತೆ ನಿಯಮಗಳನ್ನು ಪಾಲಿಸಸಲೇಬೇಕು. ಸಾಕಷ್ಟು ಸುರಕ್ಷತೆ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿಸಲು ಮತ್ತು ಅಪಘಾತಕ್ಕೀಡಾದವರ ಕುಟುಂಬದವರಿಗೆ ಆಗುವ ತೊಂದರೆಯನ್ನು ತಪ್ಪಿಸಬಹುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಪಿ. ಬಿ. ಕಳಸಗೊಂಡ, ಎನ್.ಎಸ್.ಎಸ್ ಯೋಜನಾಧೀಕಾರಿ ಆನಂದ ಚವ್ಹಾಣ, ಸಹ ಕಾರ್ಯಕ್ರಮಾಧಿಕಾರಿ ಯಲ್ಲಾಲಿಂಗ ತೋಳಮಟ್ಟಿ ಸಹ ಕಾರ್ಯಕ್ರಮಾಧಿಕಾರಿ, ಪ್ರವೀಣ ತಬ್ಬನ್ನವರ, ಎಂ. ಎಸ್. ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.