ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಮಾ.೨೩ ಹಾಗೂ ೨೪ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಾ.೨೩ರಂದು ಬೆಳಿಗ್ಗೆ ೧೧ ಗಂಟೆಗೆ ತಿಕೋಟಾ ವಾಡೆ ಆವರಣದಲ್ಲಿ ಹಮ್ಮಿಕೊಂಡ ತಿಕೋಟಾ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೬-೨೦ಕ್ಕೆ ನಗರದ ಕಿತ್ತೂರ ರಾಣಿ ಚೆನ್ನಮ್ಮ ಮಾರುಕಟ್ಟೆಯಲ್ಲಿ ಏರ್ಪಡಿಸಿರುವ ಇಫ್ತಿಹಾರ ಕೂಟದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ೭.೧೫ಕ್ಕೆ ಕಣಮುಚನಾಳದಲ್ಲಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಮಾ.೨೪ರಂದು ಬೆಳಿಗ್ಗೆ ೧೦ ಗಂಟೆಗೆ ಮದಗುಣಕಿ ಗ್ರಾಮದಲ್ಲಿ ೪ ಕೋಟಿ ರೂ. ಅನುದಾನದಲ್ಲಿ ಶೇಗುಣಸಿ-ಮದಗುಣಕಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಸಿ.ಎಸ್.ಆರ್. ೬೦ ಲಕ್ಷ ರೂ. ಅನುದಾನದಕಲ್ಲಿ ಶಾಲಾ ಕಟ್ಟಡದ ೫ ಕೊಠಗಿಳ ನವೀಕರಣಕ್ಕೆ ಮದಗುಣಕಿ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಬೆಳಿಗ್ಗೆ ೧೧ ಗಂಟೆಗೆ ಬೆಳ್ಳುಬ್ಬಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ನಂತರ ಸಾರ್ವಜನಿಕರ ಕುಂದುಕೊರತೆಗಳ ವಿಚಾರಣೆ, ಅಹವಾಲು ಸ್ವೀಕಾರ ಮತ್ತು ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
