ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಡಿ ನೊಂದಾಯಿಸಿಕೊಂಡು ಯೋಜನೆಯ ಲಾಭ ಪಡೆಯುತ್ತಿರುವ ಅರ್ಹ ಯುವ ನಿಧಿ ಫಲಾನುಭವಿಗಳು ನಿರುದ್ಯೋಗದ ಬಗ್ಗೆ ಪ್ರತಿ ತಿಂಗಳ ಬದಲಾಗಿ ಇನ್ನೂ ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಅಕವಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : ೧೮೦೦೫೯೯೭೧೫೪ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ: ೦೮೩೫೨-೨೫೦೩೮೩ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
