ವಿಜಯಪುರ: ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದೆ.
ಟ್ರ್ಯಾಕ್ಟರ್ ಡಿಕ್ಕಿ ಬಳಿಕ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿದೆ. ಕ್ರೂಸರ್ ನಲ್ಲಿದ್ದ ರೇವಣಸಿದ್ದ ಜಾತಗೊಂಡ (14) ಅಮಸಿದ್ದ ಬಂಡೆ (27) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಯಲ್ಲಮ್ಮ ದೇವರ ದರ್ಶನ ಮಾಡಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ದುರ್ಘಟನೆ ಆಗಿದೆ. ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Related Posts
Add A Comment