ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ವತಿಯಿಂದ ಶ್ರೀಕೃಷ್ಣರಾಜ ಪರಿಷತ್ ಮಂದಿರದಲ್ಲಿ ಆಯೋಜಿಸಿದ ೫೨ ವಿವಿಧ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮೌಲಾಲಿ ಕೆ. ಆಲಗೂರ ಬರೆದ ನಲಗುಗಿರಲಿ ಪರಿಸರ ಶಿಶುಗೀತೆಗಳ ಸಂಕಲನಕ್ಕೆ ೨೦೨೩ ನೇ ಸಾಲಿನ ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ ಜೊತೆಗೆ ೨೫೦೦ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕೆ.ಆರ್.ಐ.ಡಿ.ಎಲ್‌ನ ವ್ಯವಸ್ಥಾಪಕ ಬಸವರಾಜು, ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ, ಕರ್ನಾಟಕ ಸಾಹಿತ್ಯ ಅಕಾಡೆವಿ ಅಧ್ಯಕ್ಷ ಡಾ.ಎಲ್.ಎನ್.ಮುಕುಂದರಾಜ, ರವೀಂದ್ರ ಭಟ್ಟ, ಕಸಾಪ ಗೌರವ ಕಾರ್ಯದರ್ಶಿ ಡಾ.ಪದ್ಮಿನಿ ನಾಗರಾಜ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

