ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶ್ರೀ ಜಗಜ್ಯೋತಿ ಬಸವೇಶ್ವರ ಪಬ್ಲಿಕ್ ಶಾಲೆಯ ಆಡಳಿತಾಧಿ ದೀಪಾ ಎಲ್. ಪಾಟೀಲ ರವರು ಎಂ.ಈಡ್. ಪದವಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಮೂರನೇ ರ‍್ಯಾಂಕ್ ಪಡೆಯುವ ಮೂಲಕ ಅತ್ಯುತ್ತಮವಾದ ಸಾಧನೆ ಮಾಡಿದ್ದಾರೆ. ಈ ಸಾಧನೆ ಮುಂದಿನ ಎಲ್ಲ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ.
ಅವರಿಗೆ ಸಂಸ್ಥೆಯ ಅಧ್ಯಕ್ಷ ಎಲ್.ಬಿ. ಪಾಟೀಲ ಅವರು ಸಂಸ್ಥೆಯ ಚೇರಮನ್ ಶ್ರೀಮತಿ ಎಸ್.ಎಲ್. ಪಾಟೀಲ ಹಾಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಸಂತೋಷರೆಡ್ಡಿ ಎಲ್. ಪಾಟೀಲ ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.