Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ಅನುದಾನ ಕೊಟ್ಟಿದ್ದು ಬಿಜೆಪಿ ಸರಕಾರ
(ರಾಜ್ಯ ) ಜಿಲ್ಲೆ

ಸಿಂದಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ಅನುದಾನ ಕೊಟ್ಟಿದ್ದು ಬಿಜೆಪಿ ಸರಕಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

Sವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಶಾಸಕ ಮನಗೂಳಿ ಗೆ ಟಾಂಗ್

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸಿಂದಗಿ ಮತಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ಅನುದಾನ ಕೊಟ್ಟಿದ್ದು ಬಿಜೆಪಿ ಸರಕಾರ. ಈಗಿನ ಶಾಸಕರು ಮಾತ್ರ ಕೇವಲ ಪೂಜೆ ಮಾಡಲಿಕ್ಕೆ ಬಂದಿದ್ದಾರೆ. ಹಿಂದಿನ ಮಾಜಿ ಶಾಸಕರ ಪಾತ್ರವೇ ಏನು ಇಲ್ಲ ಎಂಬಂತೆ ಈಗಿನ ಆಡಳಿತ ಪಕ್ಷದ ಶಾಸಕರು ನಡೆದುಕೊಳ್ಳುತ್ತಿದ್ದಾರೆ. ಆದರೆ ನಮ್ಮ ಕಾಮಗಾರಿಗಳಿಗೆ ಈಗಿನ ಶಾಸಕರು ಪೂಜೆ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಶಾಸಕ ಅಶೋಕ ಮನಗೂಳಿ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಟಾಂಗ್ ಕೊಟ್ಟಿದ್ದಾರೆ.
ಸಿಂದಗಿ ಪಟ್ಟಣದ ಮಾಜಿ ಶಾಸಕ ರಮೇಶ ಭೂಸನೂರ ಅವರ ಸ್ವಗೃಹದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಜಯಪುರ, ಕಲಬುರಗಿ ಮತ್ತು ಬಾಗಲಕೋಟ ಸೇರಿದಂತೆ ವಿವಿಧ ಭಾಗಗಳ ರೈತರ ತೊಗರಿ ಬೆಳೆ ಈ ಬಾರಿ ಸಂಪೂರ್ಣ ನಾಶವಾಗಿ ರೈತ ಕಂಗಾಲಾಗಿದ್ದರು, ರಾಜ್ಯ ಸರಕಾರ ಮಾತ್ರ ಪರಿಹಾರ ನೀಡದಿರುವುದು ಖೇದಕರ ಸಂಗತಿ. ರಾಜ್ಯ ಕಾಂಗ್ರೆಸ್ ಸರಕಾರ ರೈತ ವಿರೋಧಿ ಸರಕಾರ. ಸರಕಾರವೇ ಈ ಬಾರಿ ಸರಕಾರ ನೀಡಿದ ಜಿಆರ್‌ಜಿ ೮೧೧ ಮತ್ತು ೧೫೨ತಳಿಯ ತೊಗರಿ ಬೀಜಗಳು ಸರಕಾರವೇ ಕೊಟ್ಟಿದ್ದು ಇದು ಕಳಪೆ ಮಟ್ಟದ್ದಾಗಿದ್ದರಿಂದ ಸರಿಯಾದ ಬೆಳೆ ಬರದೇ ಪಸಲು ನಾಶವಾಗಿ ಹೋಗಿದೆ ಇದಕ್ಯಾರು ಹೊಣೆ ಎಂದು ಪ್ರಶ್ನಿಸಿದ ಅವರು, ೧೨ಸಾವಿರ ಹೆಕ್ಟರ್ ತೊಗರಿ ಬೆಳೆ ನಾಶವಾಗಿದೆ. ರಾಜ್ಯ ಸರಕಾರ ಕೂಡಲೇ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಹಣ ಅಧಿಕಾರಿಗಳ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ಕರೆದು ಪರಿಹಾರ ನೀಡಬೇಕು ಎಂದು ಆಗ್ರಹಪಡಿಸಿದರು.
ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ತೊಗರಿ ನಾಶವಾದ ಸಂದರ್ಭದಲ್ಲಿ ಎಕರೆಗೆ ೨೫ಸಾವಿರ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್‌ನವರು ಪ್ರತಿಭಟನೆ ಮಾಡಿ ಕೇಳಿದ್ದರು, ಅಂದಿನ ಬಸವರಾಜ ಬೊಮ್ಮಾಯಿ ಸರಕಾರ ಪರಿಹಾರ ನೀಡಿದೆ. ಇಂದು ಸಿದ್ದರಾಮಯ್ಯ ಸರಕಾರವೂ ಸಹ ಕಾಂಗಾಲಾದ ರೈತರಿಗೆ ಎಕರೆಗೆ ೨೫ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಸಲುವಾಗಿ ಕೇಂದ್ರ ಸರಕಾರ ಹರ್‌ಗರ್ ಹರ್‌ನಲ್ ಜೆಜೆಎಂ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಕುಡಿಯುವ ನೀರಿನ ಕಾಮಗಾರಿಯಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಂಪೂರ್ಣ ನಿರ್ಲಕ್ಷ್ಯ ವಹಿಸಿ ಈ ಕಾಮಗಾರಿಯನ್ನು ಗುತ್ತಿಗೆದಾರರು ಮನಬಂದಂತೆ ನಿರ್ವಹಿಸಿದ್ದಾರೆ ಎಂದು ಆರೋಪಿಸಿ ಅದನ್ನು ಪರಿಶೀಲನೆ ಮಾಡಿ ಪುನಃ ಒಳ್ಳೆಯ ರೀತಿಯಲ್ಲಿ ಮಾಡಿಸುವಂತೆ ಸರಕಾರಕ್ಕೆ ಮನವಿ ಮಾಡಿಕೊಂಡರು.
ರಾಜ್ಯ ಸರಕಾರ ಅಧಿಕಾರಕ್ಕೆ ಬರಲು ಮುಸ್ಲಿಂರು ಮಾತ್ರ ಮತ ಹಾಕಿದ್ದಾರೆ ಎನ್ನುವ ರೀತಿಯಲ್ಲಿ ಬಜೆಟ್‌ನಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.೪ರಷ್ಟು ಮೀಸಲಾತಿ, ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗೆ ೩೦ಲಕ್ಷ, ಮದುವೆಯಾಗುವವರಿಗೆ ೫೦ಸಾವಿರ ರೂಪಾಯಿ ನೀಡುತ್ತಿದೆ. ರಾಜ್ಯದ ಹಿಂದುಳಿದ ವರ್ಗ ಏನು ಮಾಡಬೇಕು.? ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ರೈತರ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಇಂದಿನ ರಾಜ್ಯ ಸರಕಾರ ನಿಲ್ಲಿಸಿದೆ. ಅಲ್ಪಸಂಖ್ಯಾತರ ತುಷ್ಟಿಕರಣದಲ್ಲಿ ತೊಡಗಿದ ಕಾಂಗ್ರೆಸ್ ಪಕ್ಷ ತನ್ನ ಹೆಸರು ಬದಲಾಯಿಸಿಕೊಳ್ಳಬೇಕು ಎಂದು ಕಿಡಿಕಾರಿದರು.
ಈ ವೇಳೆ ಮಾಜಿ ಶಾಸಕ ರಮೇಶ ಭೂಸನೂರ ಲಿಂಬೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಅಶೋಕ ಆಲ್ಲಾಪುರ ಮಾತನಾಡಿ, ರಾಜ್ಯ ಸರಕಾರ ತೊಗರಿ ಬೆಳೆಗೆ ಬೆಂಬಲ ಬೆಲೆ ನೀಡಬೇಕು. ಕೇಂದ್ರದಿಂದ ೭೫೫೦ರೂ. ನೀಡಲಾಗುತ್ತಿದೆ. ಆದರೆ ರಾಜ್ಯ ಸರಕಾರ ರೂ.೪೫೦ ನೀಡುತ್ತಿಲ್ಲ ಕೂಡಲೇ ಅದನ್ನು ಬಿಡಗಡೆಗೊಳಿಸಬೇಕು ಎಂದು ಸರಕಾರಕ್ಕೆ ಆಗ್ರಹಿಸಿದ್ದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ, ಕೋಶಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಬಿ.ಎಚ್.ಬಿರಾದಾರ, ಗುರು ತಳವಾರ, ಪೀರು ಕೆರೂರ, ಪ್ರಶಾಂತ ಕದ್ದರಕಿ, ಎಸ್.ಎನ್.ಹಿರೇಮಠ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

“ವಿಧಾನಸಭಾಧ್ಯಕ್ಷ ಯು.ಟಿ.ಖಾದರ ಅವರು ಶಾಸಕರ ಹಕ್ಕುಗಳನ್ನು ಕಿತ್ತುಕೊಂಡು ಸಂವಿಧಾನ ಬಾಹಿರ ನಡೆಯನ್ನು ಅನುಸರಿಸುತ್ತಿದ್ದಾರೆ. ಮತ್ತು ಕಾಂಗ್ರಸ್ ಪಕ್ಷದ ಪ್ರಚೋದನೆಯಿಂದಲೇ ಸಭಾಧ್ಯಕ್ಷರು ಸರ್ವಾಧಿಕಾರಿ ದೋರಣೆಯನ್ನು ಅನುಸರಿಸುವ ಮೂಲಕ ೧೮ಜನ ಬಿಜೆಪಿ ಶಾಸಕರನ್ನು ೬ ತಿಂಗಳು ಅಮಾನತ್ತು ಮಾಡಿದ್ದು ಬಿಜೆಪಿ ಖಾರವಾಗಿ ಖಂಡಿಸುತ್ತದೆ. ಕೂಡಲೇ ಅಮಾನತನ್ನು ವಾಪಸ್ ಪಡೆಯಬೇಕು. ಹನಿಟ್ರ್ಯಾಪ್ ಪ್ರಕರಣ ಸಿಬಿಐ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯಾಗಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಮಾ.೨೬ ರಿಂದ ಒಂದು ವಾರಗಳ ಕಾಲ ಉಗ್ರಹೋರಾಟ ಮಾಡುತ್ತೇವೆ”

– ಎನ್.ರವಿಕುಮಾರ
ವಿಪ ವಿಪಕ್ಷ ಮುಖ್ಯ ಸಚೇತಕರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.