ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ, ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ ಭಾರತ ಸರಕಾರ ಹಾಗೂ ನೆಹರು ಯುವ ಕೇಂದ್ರ ವಿಜಯಪುರ ಇವರ ಸಹಯೋಗದಲ್ಲಿ ದಿ. ೧೯ ಮತ್ತು ೨೦ ರಂದು ಆಯೋಜಿಸಿದ್ದ ‘ವಿಕಸಿತ್ ಭಾರತ ಯುಥ್ ಪಾರ್ಲಿಮೇಂಟ್ ಮಾರ್ಚ ೨೦೨೫’ ಸ್ಪರ್ಧೆಯಲ್ಲಿ ೧೦ ಜನ ಸ್ಪರ್ಧಾಳುಗಳು ರಾಜ್ಯ ಮಟ್ಟದ ವಿಕಸಿತ್ ಭಾರತ ಯುಥ್ ಪಾರ್ಲಿಮೆಂಟ್‌ಗೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ಸ್ಪರ್ಧಾಳುಗಳಿಗೆ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಎನ್‌ಎಸ್‌ಎಸ್ ಕೋಶದ ಸಂಯೋಜನಾಧಿಕಾರಿ ಡಾ.ಅಶೋಕಕುಮಾರ ಸುರಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

