ಸಿAದಗಿ: ಕೊಪ್ಪಳ ಜಿಲ್ಲೆಯ ಮೂರನೇ ಬಾರಿಗೆ ಕನಕಗಿರಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಶಿವರಾಜ್ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಭೋವಿ ಸಮಾಜದ ಮಹಿಳಾ ಮುಖಂಡೆ ಸುನಂದಾ ಯಂಪುರೆ ಒತ್ತಾಯಿಸಿದ್ದಾರೆ.
ಶುಕ್ರವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಭೋವಿ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಸಾಮಾಜಿಕವಾಗಿ ತೀರ ಹಿಂದುಳಿದ ದಲಿತ ಸಮುದಾಯವಾಗಿದ್ದು, ಅನೇಕ ಶತಮಾನಗಳಿಂದಲೂ ಶೋಷಣೆ, ಅನ್ಯಾಯ ಮತ್ತು ದೌರ್ಜನ್ಯಕ್ಕೆ ಒಳಗಾದ ಸಮುದಾಯವಾಗಿದ್ದು, ಇಂತಹ ಸಮುದಾಯವನ್ನು ಮುಖ್ಯವಾಹಿನಿಗೆ ತರಬೇಕಾದರೆ ಶಿವರಾಜ್ ತಂಗಡಿಗಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡುವುದು ಬಹಳ ಮುಖ್ಯ ಮುಖ್ಯವಾಗಿದೆ.
ಶಿವರಾಜ ತಂಗಡಗಿಯವರು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅದ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ೩ ಕ್ಷೇತ್ರದಲ್ಲಿ ಕಾಂಗ್ರೇಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪಾತ್ರವಹಿಸಿಕೊಂಡಿದ್ದಾರೆ. ಈ ಹಿಂದೆ ಎರಡು ಬಾರಿ ಸಚಿವ ಸ್ಥಾನವನ್ನು ಯಾವುದೇ ಕಳಂಕ ಇಲ್ಲದೇ ಯಶಸ್ವಿಯಾಗಿ ನಿಭಾಯಿಸಿದ್ದು ಇವರ ಪಾರದರ್ಶಕ ಆಡಳಿತಕ್ಕೆ ಕೈಗನ್ನಡಿಯಾಗಿದೆ ಎಂದರು.
ಈ ಎರಡು ವಿಷಯಗಳನ್ನು ಗಣನೆಗೆ ತೆಗೆದುಕೊಂಡು ರಾಜ್ಯದಲ್ಲಿ ಭೋವಿ ಸಮಾಜವು ಮುಖ್ಯವಾಹಿನಿಗೆ ತರಲು ಹಾಗೂ ರಾಜ್ಯದಲ್ಲಿರುವ ಭೋವಿ ಸಮಾಜದ ಸಮಗ್ರ ಅಭಿವೃದ್ಧಿಗೆ ಸಹಕರಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕು ಎಂದು ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಸಿ.ಎಲ್.ಪಿ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರಲ್ಲಿ ಈ ಮೂಲಕ ಒತ್ತಾಯಿಸಿದ್ದಾರೆ.
ಸಿಂದಗಿ ಮತಕ್ಷೇತ್ರದ ನೂತನ ಶಾಸಕರಾಗಿ ಅಶೋಕ ಮನಗೂಳಿ ಅವರನ್ನು ಆಯ್ಕೆ ಮಾಡಿದ ಸಿಂದಗಿ ಮತದಾರರಿಗೆ ಕಾಂಗ್ರೆಸ್ ಮಹಿಳಾ ಮುಖಂಡೆ ಸುನಂದಾ ಯಂಪುರೆ ಧನ್ಯವಾದಗಳನ್ನು ತಿಳಿಸಿದ್ದಾರೆ.