Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತಿ-ಜಾತಿಗಳ ನಡುವೆ ಜಗಳ ಹಚ್ಚುತ್ತಿರುವ ರಾಜ್ಯ ಸರ್ಕಾರ :ಅಂಗಡಿ
(ರಾಜ್ಯ ) ಜಿಲ್ಲೆ

ಜಾತಿ-ಜಾತಿಗಳ ನಡುವೆ ಜಗಳ ಹಚ್ಚುತ್ತಿರುವ ರಾಜ್ಯ ಸರ್ಕಾರ :ಅಂಗಡಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುಸ್ಲಿಂ ಗುತ್ತಿಗೆ ಮೀಸಲಾತಿ, ೧೮ ಶಾಸಕರ ಅಮಾನತು ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಂ ಗುತ್ತಿಗೆ ಮೀಸಲಾತಿ ಹಾಗೂ ಅಧಿವೇಶನದಲ್ಲಿ ೧೮ ಬಿಜೆಪಿ ಶಾಸಕರ ಅಮಾನತು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನಗರದ ಅಂಬೇಡ್ಕರ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ವರೆಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಂಮರಿಗೆ ಮೀಸಲಾತಿ ಕಲ್ಪಿಸಿರುವುದು ಅಸಂವಿಧಾನಿಕ ನಡೆಯಾಗಿದೆ. ರಾಜ್ಯ ಸರ್ಕಾರದ ಜಾತಿ-ಜಾತಿಗಳ ನಡುವೆ ಜಗಳ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಅಭಿವೃದ್ಧಿ ಕೆಲಸ ಮಾಡದೆ ಸಚಿವರು ಶಾಸಕರಗಳ ವಿರುದ್ಧ ಹನಿಟ್ರ್ಯಾಪ್ ಮಾಡುತ್ತಿರುವುದು ನಾಚಿಗೇಡಿತನದ ಸಂಗತಿಯಾಗಿದೆ ಎಂದು ಟೀಕಿಸಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಮಾತನಾಡಿ, ಡಾ.ಬಾಬಾಸಾಹೇಬ ಅಂಬೇಡ್ಕರ ರಚಿಸಿರುವ ಸಂವಿಧಾನದ ಶೆಡ್ಯೂಲ್‌ನಲ್ಲಿ ಇಲ್ಲದ ಜನರಿಗೆ ಮೀಸಲಾತಿ ಕಲ್ಪಸುವ ಮೂಲಕ ಡಾ.ಅಂಬೇಡ್ಕರ ಅವರು ರಚಿಸಿದ ಸಂವಿಧಾನಕ್ಕೆ ಅಪಮಾನ ಮಾಡುತ್ತಿದೆ. ಮೇಲ್ನೋಟಕ್ಕೆ ೪% ಕಾಮಗಾರಿ ಗುತ್ತಿಗೆಗಳಲ್ಲಿ ಮೀಸಲಾತಿ ಕೊಡುವ ಕಾನೂನು ಮಾಡಿರಬಹುದು. ಆದರೆ ಪರಿಣಾಮ ಮೀಸಲಾತಿ ಚರ್ಚೆಗೆ ಧಕ್ಕೆ ತರುವಂತಹ ಹುನ್ನಾರಕ್ಕೆ ರಾಜ್ಯ ಸರ್ಕಾರ ಕೈ ಹಾಕಿದೆ ಎಂದು ಆರೋಪಿಸಿದರು.
ಮೀಸಲಾತಿ ಯಾರಿಗೆ ಸಿಗಬೇಕು ಯಾರಿಗೆ ಸಿಗಬಾರದು ಚರ್ಚೆಗೆ ಹುಟ್ಟುಹಾಕುವ ದುರುದ್ದೇಶದೊಂದಿಗೆ ಶೆಡ್ಯೂಲ್‌ನಲ್ಲಿ ಇಲ್ಲದೇ ಇರುವಂತಹವರಿಗೆ ಮೀಸಲಾತಿ ಕೊಡುವ ಕೆಲಸ ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರುಗಳ ಆತಂರಿಕ ಜಗಳದಿಂದ ಮೇಲೆ ಬರುವ ಸಲುವಾಗಿ ಇದನ್ನು ಊರುಗೋಲನ್ನಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದಾರೆಂದು ಆರೋಪಿಸಿದರು.
ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸ್ವಪ್ನಾ ಕಣಮುಚನಾಳ ಮಾತನಾಡಿದರು.
ಸಂಜೀವ ಐಹೊಳೆ, ಭೀಮಾಶಂಕರ ಹದನೂರ, ಚಿದಾನಂದ ಚಲವಾದಿ, ಉಮೇಶ ಕೋಳಕೂರ, ಅನಿಲ ಜಮಾದಾರ, ಮಹೇಂದ್ರ ನಾಯಕ, ರಾಜಕುಮಾರ ಸಗಾಯಿ, ವಿಜಯ ಕೂಡಿಗನೂರ, ಭೀಮಶಿಂಗ ರಾಠೋಡ, ಮಲ್ಲಿಕಾರ್ಜುನ ಜೋಗೂರ, ಎಸ್.ಎ.ಪಾಟೀಲ, ರವಿಕಾಂತ ಬಗಲಿ, ರಾಜು ಬಿರಾದಾರ, ಪ್ರಭುಗೌಡ ಅಸ್ಕಿ, ವಿನಾಯಕ ಗೌಳಿ, ವಿಠ್ಠಲ ಹೊಸಪೇಟ, ಸಂಪತ ಕೊವಳ್ಳಿ, ಈರನಗೌಡ ಬಿರಾದಾರ, ಅಶೋಕ ರಾಠೋಡ, ಸಿದಗೊಂಡ ಬಿರಾದಾರ, ರವಿ ಬಿರಾದಾರ, ಸುರೇಶ ಬಿರಾದಾರ, ಶೀತಲಕುಮಾರ ಓಗಿ, ಪಾಂಡು ದೊಡಮನಿ, ಕೃಷ್ಣಾ ಗುನ್ನಾಳಕರ, ವಿಜಯ ಜೋಶಿ, ಬಸವರಾಜ ಬೈಚಬಾಳ, ಜಗದೀಶ, ಪ್ರದೀಪ ಚಲವಾದಿ, ಭರತ ಕೋಳಿ, ಮಧು ಬಿ ಬಿರಾದಾರ ಶರಣ ದಳವಾಯಿ ಎಲ್.ಆರ್.ಅಂಗಡಿ, ಗೀತಾ, ಲಕ್ಷ್ಮಿ ಕನ್ನೊಳ್ಳಿ, ರಾಜಲಕ್ಷ್ಮಿ ಪರ್ವವತಿಕರ, ಪುಚ್ಪಾ, ಛಾಯಾ ಮೀಶೆ, ಗೀತಾ ಕುಗ್ಗನರ, ಸಾವಿತ್ರಿ, ಭಾರತಿ ಸೂರ್ಯವಶಂತಿ, ಗುರುದೇವಿ, ತರಡಿ, ವಿಜಯಲಕ್ಷ್ಮಿ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.