Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನರ ಆಶೋತ್ತರಗಳಿಗೆ ಸ್ಪಂದಿಸಿದ ತೃಪ್ತಿ ನನಗಿದೆ :ಸಚಿವ ಪಾಟೀಲ
(ರಾಜ್ಯ ) ಜಿಲ್ಲೆ

ಜನರ ಆಶೋತ್ತರಗಳಿಗೆ ಸ್ಪಂದಿಸಿದ ತೃಪ್ತಿ ನನಗಿದೆ :ಸಚಿವ ಪಾಟೀಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೋಟಿ ರೂ.ವೆಚ್ಚದ ರಸ್ತೆ ಅಭಿವೃದ್ದಿ-ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸಚಿವ ಡಾ.ಎಂ.ಬಿ.ಪಾಟೀಲ ಭೂಮಿ ಪೂಜೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕುಡಿಯುವ ನೀರು, ಶಿಕ್ಷಣ, ಯುವಕರಿಗೆ ಉದ್ಯೋಗ, ರಸ್ತೆ ಅಭಿವೃದ್ದಿ, ನೀರಾವರಿ, ವಿದ್ಯುತ್ ಸೇರಿದಂತೆ ಎಲ್ಲ ಮೂಲಭೂತ ಅವಶ್ಯಕತೆಗಳಿಗೆ ಆದ್ಯತೆ ನೀಡಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಜನರ ಆಶೋತ್ತರಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.
ಮದಗುಣಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಹಮ್ಮಿಕೊಂಡ ೦ ರಿಂದ ೫ ಕಿ.ಮೀ. ವರೆಗಿನ ೪ಕೋಟಿ ರೂ. ವೆಚ್ಚದ ಬಬಲೇಶ್ವರ ಮತಕ್ಷೇತ್ರದ ಶೇಗುಣಸಿ, ಮದಗುಣಕಿ, ಕೊಡಬಾಗಿ, ತಾಜಪುರ ಹಾಗೂ ಮಂಗಳೂರು ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ದಿಪಡಿಸುವ ಕಾಮಗಾರಿಗೆ ಭೂಮಿ ಪೂಜೆ ಹಾಗೂ ೨೦೨೪-೨೫ನೇ ಸಾಲಿನ ಕೆಎಸ್‌ಐಐಸಿ ಸಿ.ಆರ್.ಅನುದಾನದಲ್ಲಿ ಮದಗುಣಕಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ೫ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಬಬಲೇಶ್ವರ ಮತಕ್ಷೇತ್ರಕ್ಕೆ ಅತಿ ಹೆಚ್ಚಿನ ಅನುದಾನ ಒದಗಿಸುವ ಮೂಲಕ ಅಭಿವೃದ್ದಿ ಕೈಗೊಳ್ಳಲಾಗಿದೆ. ಬಹು ದಶಕಗಳ ಕನಸಾಗಿದ್ದ ಮಮದಾಪುರ ಕೆರೆ ತುಂಬುವುದು, ಹೂಳು ತೆಗೆಯುವ ಅಸಾಧ್ಯವಾಗುವ ಕಾರ್ಯವನ್ನು ಸಾಧ್ಯವನ್ನಾಗಿಸಿ, ಕೆರೆಗಳಲ್ಲಿ ನೀರು ತುಂಬಿಸಿರುವುದರಿಂದ ಅಂತರಜಲ ಮಟ್ಟ ಹೆಚ್ಚಾಗಿ ಈ ಭಾಗದ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ. ಕುಡಿಯುವ ನೀರು, ಶಿಕ್ಷಣ, ಯುವಕರಿಗೆ ಉದ್ಯೋಗ, ರಸ್ತೆ ಅಭಿವೃದ್ದಿ, ನೀರಾವರಿ, ವಿದ್ಯುತ್ ಸೇರಿದಂತೆ ಎಲ್ಲ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಅಭಿವೃದ್ದಿಗೆ ಆದ್ಯತೆ ನೀಡಲಾಗಿದೆ. ನೀರಾವರಿಯ ನಂತರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಸಿ.ಎಸ್.ಆರ್. ಅನುದಾನವನ್ನು ಬಳಸಿಕೊಂಡು ಹಂತ ಹಂತವಾಗಿ ಶಾಲಾ ಕೊಠಡಿಗಳ ನಿರ್ಮಾಣ, ಸ್ಮಾರ್ಟ್ ಕ್ಲಾಸ್‌ಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ವಹಿಸಲಾಗಿದೆ. ಹೈಯರ್ ಸೆಕೆಂಡರಿ ಶಾಲೆಗಳಿಗೂ ಸಿ.ಎಸ್.ಆರ್. ಅನುದಾನ ಬಳಸಿಕೊಂಡು ಅಭಿವೃದ್ದಿಪಡಿಸಲಾಗುವುದು ಎಂದು ಅವರು ಹೇಳಿದರು.
ಅರ್ಜುಣಗಿ, ಕುಮಠೆ, ತೊದಲಬಾಗಿ, ಹೆಬ್ಬಾಳಟ್ಟಿ, ತಿಗಣಿಬಿದರಿ, ನಾಗರಾಳ, ಗದ್ಯಾಳ, ಗೋಠೆ, ಯಕ್ಕುಂಡಿ, ವಕ್ಕುಂಡಿ, ನಿಡೋಣಿ, ಶೇಗುಣಸಿ ಗ್ರಾಮಗಳ ೩೦ ಸಾವಿರ ಎಕರೆಗೆ ನೀರಾವರಿ ಸೌಲಭ್ಯ ಒದಗಿಸುವ ೫ಎ-೫ಬಿ ಏತ ನೀರಾವರಿ ಯೋಜನೆ ಹಾಗೂ ಬಬಲೇಶ್ವರ ವಿತರಣಾ ಕಾಲುವೆ ನಂ. ೧೫ರ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದೆಂದ ಅವರು, ಈ ಭಾಗದಲ್ಲಿ ನೀರಾವರಿಯಿಂದ ಅತಿ ಹೆಚ್ಚು ವಿದ್ಯುತ್ ಬಳಕೆಯಾಗುತ್ತಿರುವುದನ್ನು ಮನಗಂಡು, ನೀರಾವರಿಯಷ್ಠೇ ವಿದ್ಯುತ್ ಪೂರೈಕೆಗೆ ಒತ್ತು ನೀಡಲಾಗುತ್ತಿದೆ. ೧೦ ಕೋಟಿ ರೂ. ವೆಚ್ಚದಲ್ಲಿ ಬಬಲಾದ ಹಲಗಣಿ ರಸ್ತೆ ಅಭಿವೃದ್ದಿಪಡಿಸಲಾಗುವುದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮಮದಾಪುರದ ಅಭಿನವ ಮುರುಘೇಂದ್ರ ಮಹಾಸ್ವಾಮೀಜಿ ಹಾಗೂ ಶಿವಾನಂದ ಮಹಾಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು. ಧಾರವಾಡ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕಂಬಾಗಿ ಗ್ರಾಪಂ ಅಧ್ಯಕ್ಷೆ ಸುನಂದ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.