Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜದ ಕಟ್ಟಕಡೆ ಮಹಿಳೆಯರಿಗೆ ಎನ್ನಾರೆಲ್ಲೆಮ್ ಯೋಜನೆ ಸಹಕಾರಿ
(ರಾಜ್ಯ ) ಜಿಲ್ಲೆ

ಸಮಾಜದ ಕಟ್ಟಕಡೆ ಮಹಿಳೆಯರಿಗೆ ಎನ್ನಾರೆಲ್ಲೆಮ್ ಯೋಜನೆ ಸಹಕಾರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಸಮಾಜದ ಕಟ್ಟಕಡೆಯ ಮಹಿಳೆಯರಿಗಾಗಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್.ಆರ್.ಎಲ್.ಎಮ್) ಯೋಜನೆ ಬಹಳ ಸಹಕಾರಿಯಾಗಿದೆ ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ ಹೇಳಿದರು.
ಪಟ್ಟಣದ ಸಂತೆ ಮಾರುಕಟ್ಟೆ ಸ್ಥಳದ ಹತ್ತಿರ ಜಿಲ್ಲಾ ಪಂಚಾಯತಿ ವಿಜಯಪುರ ಹಾಗೂ ತಾಲೂಕ ಪಂಚಾಯತಿ ಕೊಲ್ಹಾರ ಇವರ ಸಹಯೋಗದಲ್ಲಿ ಎನ್.ಆರ್.ಎಲ್.ಎಮ್ ಯೋಜನೆಯಡಿ ಸಂಜೀವಿನಿ ಮಾಸಿಕ ಸಂತೆ ಮೇಳ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಈ ಯೋಜನೆಯಲ್ಲಿ ಮಹಿಳೆಯರಿಗೆ ಉನ್ನತ ತರಬೇತಿಗಳನ್ನು ನೀಡಿ ಸಾಲ ಸೌಲಭ್ಯಗಳನ್ನು ನೀಡಿ ಸ್ವಂತ ಉದ್ಯೋಗ ಮಾಡಲು ಹಾಗೂ ಸ್ವ ಸಹಾಯ ಗುಂಪಿನ ಸದಸ್ಯರುಗಳು ಸೇರಿ ಉದ್ಯಮ ಪ್ರಾರಂಭಿಸಲು ಎಲ್ಲ ರೀತಿಯ ಅನುಕೂಲಗಳನ್ನು ಕಲ್ಪಿಸಿ ಕೊಡಲಾಗುವುದು ಎಲ್ಲ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ತಾಪಂ ಇಓ ಸುನೀಲ ಮದ್ದಿನ ಅಧ್ಯಕ್ಷತೆ ವಹಿಸಿ ಮಾತನಾಡಿ ಮಹಿಳೆಯರು ಸ್ವಾವಲಂಬನೆ ಬದುಕು ರೂಪಿಸಿಕೊಳ್ಳುವುದರಲ್ಲಿ ಹಾಗೂ ಅವರ ಆರ್ಥಿಕ ಜೀವನ ಮಟ್ಟ ಸುಧಾರಣೆಗಾಗಿ ಸಂಜೀವಿನಿ ಒಕ್ಕೂಟ ತಾಲೂಕಿನಲ್ಲಿ ಮಾದರಿಯಾಗಿದೆ. ಜನರಿಗೆ ಕೈಗೆಟುಕುವಂತೆ ಉತ್ತಮ ಗುಣಮಟ್ಟದ ದಿನ ಬಳಕೆ ವಸ್ತುಗಳು, ಆಹಾರ ಪದಾರ್ಥಗಳು, ಕರಕುಶಲ ವಸ್ತುಗಳು ಹಾಗೂ ಗೃಹ ಉಪಯೋಗ ವಸ್ತುಗಳನ್ನು ತಯಾರಿಸಿ ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಸಿಗುವಂತೆ ಮಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಜೀವಿನಿ ಮಹಿಳೆಯರು ಗಮನ ಸೆಳೆಯುವಂತಾಗಲಿ ಎಂದು ಹೇಳಿದರು.
ತಾಲೂಕು ವಲಯ ಮೇಲ್ವಿಚಾರಕಿ ನೀಲಾಬಾಯಿ ಭೀ. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಹೆಣ್ಣು ಸಂಸಾರದ ಕಣ್ಣು ಎಂಬ ನಾನ್ನುಡಿಯಂತೆ, ಒಂದು ಕುಟುಂಬದ ಜವಾಬ್ದಾರಿ ಹೊತ್ತು ನಿರ್ವಹಿಸುತಾಳೆ. ಅವಳಿಗೆ ಸರಿಸಾಟಿ ಯಾರು ಇಲ್ಲ. ಎಲ್ಲ ರಂಗಗಳಲ್ಲಿ ಮಹಿಳೆಯರು ಒಳ್ಳೆಯ ಕಾರ್ಯನಿರ್ವಹಣೆಯಿಂದ ಹೆಸರು ಮಾಡಿದ್ದಾರೆ. ನಮ್ಮ ತಾಲೂಕಿನ ಸಂಜೀವಿನಿ ಒಕ್ಕೂಟವು ಮುಂಚೂಣೆಯಲ್ಲಿ ಇದೆ ಎಂದು ತಿಳಿಸಿದರು.
ತಾಲೂಕಿನ 10 ಗ್ರಾಮ ಪಂಚಾಯತಿಗಳ ಒಕ್ಕೂಟದ ಅಧ್ಯಕ್ಷರನ್ನು ಹಾಗೂ ಮಹಿಳಾ ಸ್ವಚ್ಛವಾಹಿನಿಯ ಚಾಲಕರನ್ನು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸನ್ಮಾನಿಸಲಾಯಿತು. ತಾಲೂಕಿನ ಮಸೂತಿ ಗ್ರಾಮ ಪಂಚಾಯತಿಯ ಕರ ವಸೂಲಿಗಾರರಾದ ಬೌರಮ್ಮ ಬರಗಿಮಠ ಇವರು ಪ್ರತಿಶತ 100ರಷ್ಟು ತೆರಿಗೆ ವಸೂಲಿ ಮಾಡಿದ್ದಕ್ಕಾಗಿ ಸನ್ಮಾನಿಸಿಲಾಯಿತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಉಪಾಧ್ಯಕ್ಷೆ ರಾಜಮಾ ನದಾಫ, ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸಂತೋಷ ಗಣಾಚಾರಿ, ಜಿಪಂ, ತಾಪಂ ಅಧಿಕಾರಿ ಸಿಬ್ಬಂದಿಗಳು ಮತ್ತು ಒಕ್ಕೂಟದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಹಾಯಕ ಲೆಕ್ಕಾಧಿಕಾರಿಗಳಾದ ಆರ್.ಎಸ್. ಪಾಟೀಲ ಸ್ವಾಗತಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.