Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನುದಾನ ಬಳಕೆಯಾಗದಿದ್ದರೆ ಅಭಿವೃದ್ದಿ ಹೇಗೆ ಸಾದ್ಯ?
(ರಾಜ್ಯ ) ಜಿಲ್ಲೆ

ಅನುದಾನ ಬಳಕೆಯಾಗದಿದ್ದರೆ ಅಭಿವೃದ್ದಿ ಹೇಗೆ ಸಾದ್ಯ?

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ ಪಪಂ ಸಾಮಾನ್ಯ ಸಭೆಯಲ್ಲಿ ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ ಪ್ರಶ್ನೆ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪಟ್ಟಣದ ಅಭಿವೃದ್ದಿಗೆ ಮಂಜುರಾಗಿರುವ ಅನುದಾನ ಸಮಯಕ್ಕೆ ಸರಿಯಾಗಿ ಬಳಕೆ ಮಾಡಿಕೊಳ್ಳದಿದ್ದರೆ ಅಭಿವೃದ್ದಿ ಆಗಲು ಹೇಗೆ ಸಾದ್ಯ? ಎಂದು ಶಾಸಕ ಅಶೋಕ ಮನಗೂಳಿ ಪ.ಪಂ ಮುಖ್ಯಾಧಿಕಾರಿ, ಅಧ್ಯಕ್ಷ ಸದಸ್ಯರೆಲ್ಲರನ್ನು ತರಾಟೆಗೆ ತಗೆದುಕೊಂಡರು.
ಸೋಮವಾರ ಆಲಮೇಲ ಪಟ್ಟಣ ಪಂಚಾಯಿತಿ ೨೦೧೮-೧೯ನೇ ಸಾಲಿನ ಎಸ್‌ಎಪ್‌ಸಿ ವಿಶೇಷ ಅನುದಾನದ ಕಾಮಗಾರಿ ಪ್ರಗತಿ ಕುರಿತು ಚರ್ಚಿಸಲು ಕರೆದಿರುವ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತ ಹೇಳಿದರು.
ಪಟ್ಟಣದ ಅಭಿವೃದ್ದಿಗೆ ೨೦೧೮-೧೯ನೇ ಸಾಲಿನ ಎಸ್‌ಎಪ್‌ಸಿ ವಿಶೇಷ ಅನುದಾನದ ಕಾಮಗಾರಿಗಳು ಬಹುದಿನಗಳಿಂದ ನೆನಗುದಿಗೆ ಬಿದ್ದಿವೆ ಪ್ರಗತಿಯಲ್ಲಿರುವ ಕಾಮಗಾರಿಗಳು ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಇನ್ನು ಬಹುತೇಕ ಕಾಮಗಾರಿಗಳು ಪ್ರಾರಂಭವೇ ಆಗಿಲ್ಲ. ಒಂದು ವಾರ ಕಾಲಾವಕಾಶದಲ್ಲಿ ಕಾಮಗಾರಿ ಪ್ರಾರಂಭಿಸದಿದ್ದರೆ ಕಾಮಗಾರಿ ರದ್ದುಪಡಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಹಳೆಯ ಠರಾವು ಪೂರ್ಣಗೊಳಿಸದೆ ಹೊಸದಾಗಿ ಸಾಮಾನ್ಯ ಸಭೆ ಕರೆದಿರುವುದು ಮತ್ತು ಪ್ರಸ್ತುತ ಬೇಸಿಗೆಯಲ್ಲಿ ಪಟ್ಟಣದ ಜನರಿಗೆ ಕುಡಿಯುವ ನೀರಿಗೆ ಯಾವ ಮೂಲಗಳು ಅವಲಂಬಿಸಿದ್ದೀರಿ ಎಂದು ಕೇಳಿದ ಪ್ರಶ್ನೆಗೆ ಅಧಿಕಾರಿಗಳಲ್ಲಿ ಯಾವುದೆ ಮಾಹಿತಿ ಇಲ್ಲದರಿಂದ ಮುಖ್ಯಾಧಿಕಾರಿ ಸುರೇಶ ನಾಯಕ ಅವರನ್ನು ತರಾಟೆಗೆ ತಗೆದುಕೊಂಡರು.
ಆಲಮೇಲ ಪಟ್ಟಣ ಪಂಚಾಯಿತಿಗೆ ಆದಾಯದ ಕೊರತೆ ಹೆಚ್ಚಿದ್ದು ಆದಾಯದ ಮೂಲಗಳನ್ನು ಹೆಚಿಸಿಕೊಳ್ಳಬೇಕು ಎಂದರು.
ಪಟ್ಟಣದ ಪ್ರಮುಖ ದೇವರ ಅಗಸಿ ಕಾಮಗಾರಿ ಪ್ರಾರಂಭವಾಗಿ ೫ ವರ್ಷಗಳಾದರೂ ಇನ್ನು ಪೂರ್ಣಗೊಂಡಿಲ್ಲ ಈ ಬಗ್ಗೆ ಸಾರ್ವಜನಿಕರು ಬೆಸರಗೊಂಡಿದ್ದಾರೆ ಒಂದು ತಿಂಗಳಲ್ಲಿ ದೇವರ ಅಗಸಿ ಕಾಮಗಾರಿ ಪೂರ್ಣಗೊಳಿಸಬೇಕು. ಹಾಗೂ ಪಟ್ಟಣದಲ್ಲಿ ೩೫ ಲಕ್ಷ ವೆಚ್ಚದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಚಾಲನೆ ನೀಡದೆ ಅದರ ಬದಲಿಗೆ ವಾಣಿಜ್ಯ ಮಳಿಗೆಗಳು ನಿರ್ಮಾಣ ಮಾಡಲಾಗುತ್ತಿದೆ. ಈ ಬಗ್ಗೆ ಮತ್ತೊಮ್ಮೆ ಭವನ ಮತ್ತು ವಾಣಿಜ್ಯ ಮಳಿಗೆ ನಿರ್ಮಾಣದ ಪರವಾನಿಗೆ ಪಡೆದುಕೊಂಡು ನಿರ್ಮಾಣ ಮಾಡಬೇಕು ಎಂದು ಹೇಳಿದರು.
ಶಾಸಕರು ಅನುದಾನ ಹಂಚಿಕೆಯಲ್ಲಿ ಬಿಜೆಪಿ ಸದಸ್ಯರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂಬ ಸಂಜೀವಕುಮಾರ ಯಂಟಮಾನ, ಹಣಮಂತ ಹೂಗಾರ ಆರೋಪಕ್ಕೆ ಅಧ್ಯಕ್ಷ ಸಾದೀಕ ಸುಂಬಡ, ನಿಮ್ಮ ಶಾಸಕರು ಇದೇ ರೀತಿ ತಾರತಮ್ಯ ಮಾಡಿದ್ದರು ಎಂದಾಗ ಕೆಲಹೊತ್ತು ವಾದ ವಾದಗಳ ನಂತರ ಶಾಸಕರು ಸಮಾಧಾನಪಡಿಸಿ, ಅಭಿವೃದ್ದಿ ವಿಷಯದಲ್ಲಿ ಯಾವುದೆ ರಾಜಕೀಯ ತಾರತಮ್ಯ ಮಾಡುವದಿಲ್ಲ. ಕೆಲವು ವಾರ್ಡಗಳಿಗೆ ಹೆಚ್ಚಿನ ಸಮಸ್ಯೆಗಳಿರುವದರಿಂದ ಹೆಚ್ಚಿನ ಅನುದಾನ ನೀಡಿರಬಹುದು, ಯಾವುದೆ ಕಾರಣಕ್ಕು ತಾರತಮ್ಯ ಮಾಡುವದಿಲ್ಲ ಎಂದರು.
ಅಧ್ಯಕ್ಷ ಸಾದೀಕ ಸುಂಬಡ, ಉಪಾದ್ಯಕ್ಷೆ ಸುಮಾ ಕತ್ತಿ. ಮುಖ್ಯಾಧಿಕಾರಿ ಸುರೇಶ ನಾಯಕ, ಸದಸ್ಯರಾದ ಹಣಮಂತ ಹೂಗಾರ, ಡಾ| ಸಂಜೀವಕುಮಾರ ಎಂಟಮಾನ, ಅಶೋಕ ಕೊಳಾರಿ, ಚಂದು ಹಳೆಮನಿ, ಶ್ರೀಶೈಲದಾದ ರಜಪೂತ ಸೇರಿದಂತೆ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.