Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆಯರ ಅಭ್ಯುದಯಕ್ಕಾಗಿ ಹಲವು ಯೋಜನೆಗಳ ಜಾರಿ
(ರಾಜ್ಯ ) ಜಿಲ್ಲೆ

ಮಹಿಳೆಯರ ಅಭ್ಯುದಯಕ್ಕಾಗಿ ಹಲವು ಯೋಜನೆಗಳ ಜಾರಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾಹಿತಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಿಳೆಯು ಶಕ್ತಿಯ ಪ್ರತಿಕ. ಮಹಿಳೆಯರನ್ನು ಗೌರವಿಸುವ ದೇಶ ನಮ್ಮದಾಗಿದೆ. ಮಹಿಳೆಯರು ಮುಂಚೂಣಿಯಲ್ಲಿರಬೇಕೆಂಬ ದೃಷ್ಟಿಯಿಂದ ಮಹಿಳೆಯರ ಅಭ್ಯುದಯಕ್ಕಾಗಿ ಜಿಲ್ಲೆಯಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಆ ಮೂಲಕ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಹಕ್ಕುಗಳು, ಸಮಾನತೆ ಹಾಗೂ ಸಬಲೀಕರಣಕ್ಕಾಗಿ-ತ್ವರಿತ ಕ್ರಮ ಎಂಬ ಧ್ಯೇಯದಡಿ ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ-೨೦೨೫ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಹಿಂದೆ ಅನೇಕ ಮೌಢ್ಯ ಮತ್ತು ಕಂದಾಚಾರಗಳಿದ್ದವು, ಈಗ ಬಹಳಷ್ಟು ಸುಧಾರಣೆಯಾಗಿವೆ. ಸಾಮಾಜಿಕ ಸ್ತರದಲ್ಲಿ ಮಹಿಳೆ ಸ್ವಾವಲಂಬಿಯಾಗಿ ತನ್ನ ಕುಟುಂಬವನ್ನು ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ ಹಲವಾರು ಯೋಜನೆಯನ್ನು ಸರ್ಕಾರ ಅನುಷ್ಟಾನ ತಂದಿದ್ದು, ಸಾಮಾಜಿಕ ಸಮಸ್ಯೆಗಳ ನಿವಾರಣೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇಂದು ಮಹಿಳೆ ಎಲ್ಲ ರಂಗಗಳಲ್ಲೂ ಮುಂದಿದ್ದು, ಅಭಿವೃದ್ಧಿಯ ಪಥದಲ್ಲಿ ಮಹಿಳೆಯರ ಪಾತ್ರ ಅಪಾರ. ಸಮಾಜವು ಮಹಿಳೆಯರನ್ನು ಗೌರವಿಸಬೇಕು. ಮಹಿಳಾ ಸಾಧಕರನ್ನು ಸ್ಪೂರ್ತಿಯಾಗಿಟ್ಟುಕೊಂಡು ಸಾಧನೆಯ ಹಾದಿಯಲ್ಲಿ ನಡೆದು ಈ ದೇಶಕ್ಕೆ ಕೊಡುಗೆ ನೀಡಬೇಕೆಂದು ಹೇಳಿದರು.
ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಅಹಲ್ಯಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನದ ಮುಖ್ಯಸ್ಥರು ಹಾಗೂ ನಿರ್ದೇಶಕಿ ಪ್ರೊ. ಲಕ್ಷ್ಮೀದೇವಿ ವೈ. ಉಪನ್ಯಾಸ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಶಿಶು ಅಭಿವೃದ್ದಿ ಅಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು. ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸನ್ಮಾನಿಸಲಾಯಿತು. ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.

“ಮಹಿಳೆ ಈ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ತಾಯಿಯ ತ್ಯಾಗ ಜಗತ್ತಿನ ಎಲ್ಲ ಪ್ರಶಸ್ತಿಗಳಿಗೂ ಮಿಗಿಲಾಗಿದೆ ಮಹಿಳೆ ಸ್ವಾವಲಂಬಿ ಜೀವನ ನಡೆಸುವಂತಾಗಬೇಕು. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವುದು ಅತ್ಯವಶ್ಯಕವಾಗಿದ್ದು, ಅಂಗನವಾಡಿಗಳ ಮೂಲಕ ಮಕ್ಕಳಿಗೆ ಶಿಕ್ಷಣ ದೊರಕಿಸುವ ಇಲಾಖೆ ಕಾರ್ಯವಾಗಿದ್ದು, ನಾಡಿನ, ನಾಳಿನ ಭವಿಷ್ಯ ಮಕ್ಕಳ ಸೇವೆ ಮಾಡುವ ಅವಕಾಶ ದೊರಕಿದೆ. ಜಿಲ್ಲೆಯ ಎಲ್ಲ ಅಂಗನವಾಡಿಗಳ ಶ್ರೇಯೋಭಿವೃದ್ದಿಗಾಗಿ ಶ್ರಮಿಸಲಾಗುವುದು”

– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ
    In ವಿಶೇಷ ಲೇಖನ
  • ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ
    In (ರಾಜ್ಯ ) ಜಿಲ್ಲೆ
  • ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗೆ ಕೃತಕ ತಂತ್ರಜ್ಞಾನ ಬಳಸಿದರೆ ಅಧಿಕ ಬೆಳೆಯಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಜೀವನ ವಿಕಾಸಕ್ಕೆ ಶಿಕ್ಷಣ ಅವಶ್ಯಕ :ರಂಭಾಪುರಿ ಜಗದ್ಗುರು
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಸುಸಜ್ಜಿತ ಕಾಮಗಾರಿಗೆ ಕೈ ಜೋಡಿಸಿ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಿಂದ ಎಂ.ಡಿ ಮಂಚಯ್ಯ ಅನರ್ಹ
    In (ರಾಜ್ಯ ) ಜಿಲ್ಲೆ
  • ಕೋಟ್ಯಾಳದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.