ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತದ ಮೂಲಕ ಏಪ್ರಿಲ್ ೦೨ ರಂದು ದೇವರ ದಾಸಿಮಯ್ಯ ಹಾಗೂ ಏಪ್ರಿಲ್ ೧೦ ರಂದು ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಏಪ್ರಿಲ್ ೦೨ ರಂದು ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಕಾರ್ಯಕ್ರಮದಲ್ಲಿ ಸಂಗೀತ ಕಾರ್ಯಕ್ರಮ ಉಪನ್ಯಾಸ ಜರುಗಲಿವೆ. ಏಪ್ರಿಲ್ ೧೦ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ವರೆಗೆ ವಿವಿಧ ಕಲಾ ತಂಡದೊಂದಿಗೆ ಭಾವಚಿತ್ರದ ಮೆರವಣಿಗೆ, ನಂತರ ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಈ ಮಹನೀಯರ ಆದರ್ಶ ವಿಚಾರಧಾರೆಗಳ ಕುರಿತು ಬೆಳಕು ಚೆಲ್ಲಲು ಉಪನ್ಯಾಸ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವುಂತೆಯೂ, ಜಯಂತಿ ಜಯಂತಿ ಕಾರ್ಯಕ್ರಮಗಳನ್ನು ಜವಾಬ್ದಾರಿಯುತವಾಗಿ ಅರ್ಥಪೂರ್ಣ ಆಚರಣೆಗೆ ಸಂಬಂಧಿಸಿದ ಅಧಿಕಾರಿಗಳು ಆಮಂತ್ರಣ ಪತ್ರಿಕೆ, ಮೆರವಣಿಗೆಗೆ ಸಂಬಂಧಿಸಿದ ಸಿದ್ಧತೆ ಮಾಡಿಕೊಳ್ಳುವುದು. ಯಾವುದೇ ಲೋಪವಾಗದಂತೆ ಶಿಷ್ಠಾಚಾರವನ್ನು ಕಾರ್ಯಕ್ರಮ ಆಯೋಜಿಲಸು ಸಂಬAಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸ್ವಾಗತಿಸಿದರು. ಸಭೆಯಲ್ಲಿ ಸಮಾಜದ ಮುಖಂಡರುಗಳಾದ ಎಂ.ಬಿ ನೂಲವಿ, ಎ.ಬಿ ಅಂಕದ, ಪ್ರವೀಣ ಬಸರಕೋಡ, ಸಂಗಮೇಶ ಮೇತ್ರಿ, ಎಸ್.ಜಿ ಸುರಪುರ, ಲಾಲಚಂದ ಜೈನ್, ಅರುಣ ರುಣವಾಲ, ದಿನೇಶ ದರ್ವೇಶ, ನಿತಿನ ರುಣವಾಲ, ಸಂಜಯ ಪೋರವಾಲ, ವಿಮಲ ಸಂಘವಿ, ಮದನ್ ಜೈನ್, ಅರುಣ ಚಕ್ರವರ್ತಿ, ಭೀಮರಾಯ ಜಿಗಜಿಣಗಿ, ಗಿರೀಶ ಕುಲಕರ್ಣಿ, ಈರಣ್ಣಾ ಕದರಿ, ರವೀಂದ್ರ ಎಚ್ ಕಂಠಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
