Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವ ಜನಾಂಗ ಜಾನಪದ ಸಂಸ್ಕೃತಿ ಪ್ರೀತಿಸಲಿ :ಬಾಳನಗೌಡ
(ರಾಜ್ಯ ) ಜಿಲ್ಲೆ

ಯುವ ಜನಾಂಗ ಜಾನಪದ ಸಂಸ್ಕೃತಿ ಪ್ರೀತಿಸಲಿ :ಬಾಳನಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಮ್ಮ ದೇಶದ ಸಂಸ್ಕೃತಿ ಜಾನಪದದ ಮೂಲಕ ಪರಂಪರಾಗತವಾಗಿ ನಡೆದುಕೊಂಡು ಬರುತ್ತಿದೆ. ಜಾನಪದ ಆಚಾರ, ವಿಚಾರ, ನಂಬಿಕೆ, ಸಂಪ್ರದಾಯಗಳು ಮಾನವೀಯ ಮೌಲ್ಯಗಳನ್ನು ಬಿಂಬಿಸುತ್ತಿವೆ. ಜಾನಪದವು ಮೇರುಸ್ತರದ ವಿಚಾರಗಳನ್ನು ಕಲಿಸುತ್ತದೆ ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) ಅಭಿಪ್ರಾಯಪಟ್ಟರು.
ವಿಜಯಪುರ ನಗರದ ( ನವಬಾಗ) ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಜಾನಪದ ಉತ್ಸವ ೨೦೨೫ ” ಅಡಿಯಲ್ಲಿ ” ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ವಿದೇಶಿ ವ್ಯಾಮೋಹ ಮತ್ತು ವೈಜ್ಞಾನಿಕ ಪ್ರಭಾವದಿಂದ ಯುವ ಜನಾಂಗ ಜಾನಪದ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಸಂಸ್ಕಾರವಿಲ್ಲದ ಶಿಕ್ಷಣ ಪಡೆದು ಸಂಸಾರಕ್ಕೆ ಕಂಟಕವಾಗುತ್ತಿದ್ದಾರೆ. ಅದಕ್ಕಾಗಿ ಯುವಕರು ಜಾನಪದ ಸಂಸ್ಕೃತಿ ಪ್ರೀತಿಸಬೇಕು ಅದರಂತೆ ಬದುಕಬೇಕು ಎಂದರು.
ಅಧ್ಯಕ್ಷತೆವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ ಎ ಆಯ್ ಹಂಜಗಿ, ಜಾನಪದ ನಡೆ- ನುಡಿ ತಾಯಿಯ ಎದೆಹಾಲಿನಂತೆ ಅಮೃತಕ್ಕೆ ಸಮಾನವಾಗಿವೆ. ಪ್ರಾಚೀನರು ಹಾಕಿಕೊಟ್ಟ ಜಾನಪದದ ಹೆಜ್ಜೆ ಗುರುತುಗಳು ಇಂದು ನಮ್ಮ ಬದುಕಿಗೆ ದಾರಿದೀಪಗಳಾಗಿವೆ. ತಾಯಿ ಜಾನಪದ ಸಂಸ್ಕೃತಿ ಮಕ್ಕಳಲ್ಲಿ ತುಂಬುವ ಮೊದಲ ಗುರುವಾಗಿದ್ದಾಳೆ. ಆದ್ದರಿಂದ ಯುವಜನ ಜಾನಪದ ಸಂಸ್ಕೃತಿಯಂತೆ ಬದುಕಿ ಬಾಳಿಲಿ ಎಂದು ಕರೆ ನೀಡಿದರು.
ಪ್ರಾಸ್ತಾವಿಕವಾಗಿ ಕಾಲೇಜಿನ ಸಾಂಸ್ಕೃತಿಕ ಸಂಚಾಲಕ ಡಾ ಬಸವನಗೌಡ ಶ್ಯಾಡದಳ್ಳಿ ಮಾತನಾಡಿದ ಕಾಲೇಜು ಶಿಕ್ಷಣ ಇಲಾಖೆ ಜಾನಪದ ಕಾರ್ಯಕ್ರಮ ನಡೆಸಲು ಆದೇಶ ನೀಡಿದ್ದು ಎರಡು ದಿನಗಳ ಕಾಲ ವಿಧ್ಯಾರ್ಥಿಗಳಿಗೆ ಏರ್ಪಡಿಸಿದ ಕಾರ್ಯಕ್ರಮ ಕುರಿತು ವಿವರಿಸಿದರು.
ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ ಆರ್ ಎಸ್ ಕುರಿ ಮಾತನಾಡಿದರು.
ಕಾಖಂಡಕಿಯ ಕಮಲವ್ವ ಸಿದರಡ್ಡಿ ಮತ್ತು ತಂಡದವರಿಂದ ಚೌಡಕಿ ಪದಗಳ ಪ್ರದರ್ಶನ ನಡೆಯಿತು.ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿಧ್ಯಾರ್ಥಿಗಳಿಗೆ ಜಾನಪದದ ವಿವಿಧ ಸ್ಪರ್ಧೆಗಳಾದ ಹಗ್ಗಜಗ್ಗಾಟ, ಲಗೋರಿ, ಬುಗುರಿ, ಗೋಣಿಚೀಲ ಆಟ, ಕುಂಟೆಬಿಲ್ಲೆ, ಜಾನಪದ ನೃತ್ಯ, ದೇಶಿಆಹಾರ, ಡೊಳ್ಳು ಕುಣಿತ ಮುಂತಾದ ಸ್ಫರ್ಧೆ ಏರ್ಪಡಿಸಲಾಗಿತ್ತು‌
ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಡಾ ರಮೇಶ ಕೆ ತೇಲಿ ನಿರೂಪಿಸಿದರು. ಉಪನ್ಯಾಸಕ ಪ್ರೊ ಎಂ ಎಸ್ ಖೋದ್ನಾಪುರ ವಂದಿಸಿದರು. ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.