ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರವಾಸೋದ್ಯಮ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿ ೨ನೇ ಹಂತದ ಪ್ರವಾಸೋದ್ಯಮ-ಆತಿಥ್ಯ ಕ್ಷೇತ್ರದ ಕೌಶಲ್ಯಾಭಿವೃದ್ಧಿಯ ೪ ತಿಂಗಳ ತರಬೇತಿಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕೇತ್ರ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಹಾಗೂ ಇನ್ಸಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ಮ ೮ನೇ ತರಗತಿ ತೇರ್ಗಡೆಯಾದ ೨೦ ರಿಂದ ೪೫ ವಯಸ್ಸಿನ ಅಭ್ಯರ್ಥಿಗಳಿಗೆ ಲ್ಟಿ ಕ್ಯೂಸಿನ್ ಕುಕ್ ತರಬೇತಿ ಹಾಗೂ ೧೦ನೇ ತರಗತಿ ಪಾಸಾದ ೨೦ ರಿಂದ ೪೫ ವಯಸ್ಸಿನ ಅಭ್ಯರ್ಥಿಗಳಿಗೆ ಫುಡ್ ಮತತು ಬೇವರೇಜ್ ಸರ್ವಿಸ್ ಸ್ಟೇವರ್ಡ್ ವಸತಿ ಸಹಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಆಸಕ್ತರು ಮಾ.೨೮ರಂದು ನಗರದ ಇಂಡಿ ರಸ್ತೆಯಲ್ಲಿರುವ ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : ೦೪-೦೪-೨೦೨೫ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರ ಕಚೇರಿ, ಪ್ರವಾಸಿ ಪ್ಲಾಜಾ, ಬ್ಲಾಕ್-೧, ಇಂಡಿ ರಸ್ತೆ ವಿಜಯಪುರ ದೂರವಾಣಿ ಸಂಖ್ಯೆ-೦೮೩೫೨-೨೫೦೩೫೯ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
