Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನನ್ನ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ :ಯತ್ನಾಳ
(ರಾಜ್ಯ ) ಜಿಲ್ಲೆ

ನನ್ನ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ :ಯತ್ನಾಳ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕುಟುಂಬ ರಾಜಕಾರಣದಲ್ಲಿ ಮುಳುಗಿದ ಬಿಜೆಪಿ | ನೇಶನ್ ಫಸ್ಟ್, ಪಾರ್ಟಿ ನೆಕ್ಸ್ಟ್, ಸೆಲ್ಫ್ ಲಾಸ್ಟ್ ತತ್ವದಡಿ ಕೆಲಸ | ಶಾಸಕ ಬಸನಗೌಡ ಪಾಟೀಲ ಸ್ಪಷ್ಟನೆ

ಬೆಂಗಳೂರು: ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್​ಯತ್ನಾಳ ಹೇಳಿದ್ದಾರೆ.
ಗುರುವಾರ ಈ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ. ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ಬೇಸರ ಹೊರಹಾಕಿದ್ದಾರೆ.
ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ. ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕ ಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ ‘ಅಡ್ಜಸ್ಟ್ಮೆಂಟ್ ರಾಜಕಾರಣದಿಂದ’ ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ.
ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು. ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ
ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ.

ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷರಾದ ಶ್ರೀ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು. ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ ವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಹೇಳಿದ್ದಾರೆ.

“ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ. Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ.”

– ಬಸನಗೌಡ ಪಾಟೀಲ ಯತ್ನಾಳ
ಶಾಸಕರು, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.