ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ತಾಲೂಕಿನ ಹಿಪ್ಪರಗಿ ಗ್ರಾಮದ ಪೂಜ್ಯಶ್ರೀ ಡಾ.ಸಿದ್ಧರಾಮ ಶಿವಾಚಾರ್ಯ ಹಿರಿಯ ಪ್ರಾಥಮಿಕ ಶಾಲೆಯ ವಿಧ್ಯಾರ್ಥಿನಿ, ಕುಮಾರಿ ಆರಾಧ್ಯಾ ಸಿದ್ದು ಗಾಳಿ ಇವಳು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ಪರೀಕ್ಷೆಯಲ್ಲಿ ಶೇ 97 ಅಂಕ ಪಡೆದು ರಾಜ್ಯಕ್ಕೆ ಎರಡನೇಯ ರ್ಯಾಂಕ ಪಡೆದು ಹಿಪ್ಪರಗಿ ಗ್ರಾಮಕ್ಕೆ ಹಾಗೂ ಶಾಲೆಗೆ ಕೀರ್ತಿ ತಂದಿರುತ್ತಾಳೆ.
ಸಂಸ್ಥೆಯ ಅಧ್ಯಕ್ಷ ಬಸವರಾಜ ಮ. ಕುಲ್ಹಳ್ಳಿ ಹಾಗೂ ಆಢಳಿತ ಮಂಡಳಿಯ ಸದಸ್ಯರು, ಮುಖ್ಯಗುರುಗಳು ಸಿಬ್ಬಂದಿವರ್ಗ ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿರುತ್ತಾರೆ.

