ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾ.೨೮ ರಂದು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಜಯಪುರ ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿಗಳಾದ ಅನಸೂಯಾ ಚಲವಾದಿ, ಅಗ್ರಣೀಯ ಬ್ಯಾಂಕಿನ ವ್ಯವಸ್ಥಾಪಕರಾದ ನೇತಾಜಿ ಗೌಡರ್, ಖಾದಿ ಮಂಡಳಿಯ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಎನ್.ಡಿ.ಕಾಂಬ್ಳೆ, ಮಹಾನಗರ ಪಾಲಿಕೆಯ ಉಪಾಯುಕ್ತರಾದ ವೈ.ಎಚ್.ನಾರಾಯಣಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಅರವಿಂದ ಕನ್ನೂರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳಿದ್ದರು.