ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತೀಯ ನೌಕಾಪಡೆಯಲ್ಲಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅಗ್ನಿವೀರ್ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್ http://joinindiannavy.gov.inನಲ್ಲಿ ದಿನಾಂಕ ೨೯-೦೩-೨೦೨೫ ರಿಂದ ದಿನಾಂಕ ೧೦-೦೪-೨೦೨೫ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯ ದೂರವಾಣಿ ಸಂಖ್ಯೆ :೦೮೩೫೨೨೫೦೯೧೩ ಅಥವ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.