Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ಪಾಲಕರಿಗೆ ಸದಾ ಗೌರವ ನೀಡಿ :ಡಾ.ಜಾವಿದ್
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ಪಾಲಕರಿಗೆ ಸದಾ ಗೌರವ ನೀಡಿ :ಡಾ.ಜಾವಿದ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿಗಳು ದೇಶಭಕ್ತಿಯ ಜೊತೆಗೆ ಪಾಲಕರಿಗೆ ಸದಾ ಗೌರವ ನೀಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಎನ್‌ಎಸ್‌ಎಸ್ ಸಲಹಾ ಸಮಿತಿಯ ಸದಸ್ಯ ಡಾ.ಜಾವಿದ್ ಜಮಾದಾರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಸರ್ಕಾರ ಎನ್‌ಎಸ್‌ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಗುರುವಾರ ಆಯೋಸಿದ್ದ ‘ರಾಷ್ಟ್ರೀಯ ಭಾವೈಕ್ಯತಾ ಶಿಬಿರ-೨೦೨೫’ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ದೇಶಭಕ್ತಿಯ ಮನೋಭಾವನೆ ಬೆಳೆಸಿಕೊಳ್ಳಬೇಕು. ನಮಗಾಗಿ ನಿತ್ಯ ಜೀವನವನ್ನೇ ತ್ಯಾಗ ಮಾಡುವ ಪಾಲಕರ ಋಣವನ್ನು ಯಾವತ್ತೂ ತೀರಿಸಲು ಸಾಧ್ಯವಿಲ್ಲ. ಪಾಲಕರಿಗೆ ನಾವು ಸದಾ ಗೌರವ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಭಾವನಾತ್ಮಕವಾಗಿ ಕರೆ ನೀಡಿದರು. ಅಲ್ಲದೇ, ವಿದ್ಯಾರ್ಥಿಗಳು ಸಂಸ್ಕೃತಿ, ಆಚಾರ-ವಿಚಾರಗಳನ್ನು ಅರಿಯಬೇಕು. ಜನರೊಂದಿಗೆ ಒಡನಾಟ ಬೆಳೆಸಿಬೇಕು. ಎನ್.ಎಸ್.ಎಸ್ ಚಟುವಟಿಕೆಗಳ ಮೂಲಕ ಪಬ್ಲಿಕ್ ನೆಟ್ವರ್ಕಿಂಗ್ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಸೇವೆ ಹಾಗೂ ಶ್ರಮದ ಮಹತ್ವವನ್ನು ಸಾರುವಂಥದ್ದಾಗಿದೆ. ಆತಿಥ್ಯಕ್ಕೆ ಹೆಸರಾದ ವಿಜಯಪುರ ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಯುವ ಪ್ರತಿನಿಧಿಗಳು ಆಗಮಿಸಿದ್ದು ಸಂತೋಷದ ಸಂಗತಿ. ಅವರಿಗಾಗಿ ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದ್ದು, ನಮ್ಮ ಸಂಸ್ಕೃತಿಯನ್ನು ಅವರಿಗೂ ಪರಿಚಯಿಸುವ ಅವಕಾಶ ಈ ಕಾರ್ಯಕ್ರಮದ ಮೂಲಕ ಸಿಕ್ಕಿದೆ. ವಿದ್ಯಾರ್ಥಿಗಳು ಶ್ರಮದ ಮಹತ್ವವನ್ನು ಅರ್ಥಮಾಡಿಕೊಂಡು, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಮಾತನಾಡಿ, ಎನ್‌ಎಸ್‌ಎಸ್ ಶಿಬಿರಗಳು ಸೇವಾ ಮನೋಭಾವವನ್ನು ಬೆಳೆಸುವ ಮೂಲಕ ದೇಶದ ವಿಭಿನ್ನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಅರಿಯುವ ಪ್ರಮುಖ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಶ್ರಮದ ಮಹತ್ವವನ್ನು ಗ್ರಹಿಸಿ, ಸಮೂಹ ಬದುಕಿನ ಅನುಭವ ಪಡೆಯಲು ಈ ಶಿಬಿರಗಳು ಉತ್ತಮ ಅವಕಾಶವನ್ನು ಒದಗಿಸುತ್ತವೆ ಎಂದರು.
ಇದೇ ಸಂದರ್ಭದಲ್ಲಿ ಎನ್‌ಎಸ್‌ಎಸ್ ಕೋಶದ ಸಂಯೋಜನಾಧಿಕಾರಿ ಡಾ.ಅಶೋಕಕುಮಾರ ಸುರಪುರ ಮಾತನಾಡಿ, ಕಳೆದ ಏಳು ದಿನಗಳಿಂದ ನಡೆದ ಭಾವೈಕ್ಯತಾ ಶಿಬಿರದ ಕಾರ್ಯ ಚಟುವಟಿಕೆಗಳ ಕುರಿತು ವಿವರಣೆ ನೀಡಿ, ಕಳೆದ ಏಳು ದಿನಗಳಿಂದ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ವರ್ಣರಂಜಿತ ತೆರೆ ಬಿದ್ದಿತು. ಮಹಾರಾಷ್ಟçದವರು ಕನ್ನಡ ಭಾಷೆಯಲ್ಲಿ, ಕನ್ನಡಿಗರು ತಮಿಳು ಬಾಷೆಯಲ್ಲಿ ಸ್ವಾಗತ ಹಾಗೂ ಪರಸ್ಪರ ಶುಭ ಕೋರುವ ಮೂಲಕ `ಭಾವೈಕ್ಯತೆ’ ಸಂದೇಶ ಸಾರಿದರು. ಏಳು ದಿನಗಳ ಕಾಲ ಸಂತೋಷದಿಂದ ಅವರ ಭಾಷೆ ಇವರು, ಇವರ ಭಾಷೆ ಅವರು ಕಲಿತು ಬೇರೆ ಬೇರೆ ಭಾಷೆಗಳಲ್ಲಿಯೇ ಮಾತನಾಡುವ ಮೂಲಕ ಅಚ್ಚರಿ ಮೂಡಿಸಿದರು. ಆಯಾ ರಾಜ್ಯದ ಉಡುಗೆ ಸಂಸ್ಕೃತಿಯನ್ನು ಸಾರುವ ವೇಷದಲ್ಲಿ ಯುವ ಸ್ವಯಂಸೇವಕರು ಗಮನ ಸೆಳೆದು ತಮ್ಮ ರಾಜ್ಯದ ಸಾಂಸ್ಕೃತಿಕ ಸಿರಿವಂತಿಕೆಯನ್ನು ಪರಿಚಯಿಸುವಲ್ಲಿ ಯಶಸ್ವಿಯಾದರು ಎಂದರು.
ಸಮಾರಂಭದಲ್ಲಿ ಕೇರಳ, ತಮಿಳುನಾಡು, ಮಹಾರಾಷ್ಟç ಸೇರಿದಂತೆ ಏಳು ರಾಜ್ಯಗಳಿಂದ ೬೫ ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿಂದ ೨೦೦ ಕ್ಕೂ ಹೆಚ್ಚು ಎನ್‌ಎಸ್‌ಎಸ್ ಸ್ವಯಂ ಸೇವಕರು, ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ವಿಷ್ಣು ಶಿಂದೆ, ಮಲ್ಲಮ್ಮ ಬಾಜಪ್ಪನ್ನವರ, ವಿವಿಧ ವಿಭಾಗಗಳ ವಿದ್ಯಾರ್ಥಿನಿಯರು, ಮುಖ್ಯಸ್ಥರು, ಬೋಧಕ ವರ್ಗದವರು ಉಪಸ್ಥಿತರಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.