ವಿಜಯಪುರ & ಬಾಗಲಕೋಟೆ ಜಿಪಂ ಸಿಇಓ ರಿಗೆ ಎಂಎಲ್ಸಿ ಸುನೀಲಗೌಡ ಪಾಟೀಲ ಪತ್ರ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ರಡಿ ಅರ್ಹ ವಸತಿ ರಹಿತರ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ ಅವಧಿಯನ್ನು ಇದೇ ಏಪ್ರೀಲ್ 30ರ ವರೆಗೆ ವಿಸ್ತರಿಸಲಾಗಿದ್ದು, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯೋನ್ಮುಖರಾಗುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿಗಳು, ಎಲ್ಲ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿ.ಡಿ.ಓ)ಗಳಿಗೆ ಪತ್ರ ಬರೆದಿದ್ದಾರೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ರಡಿ ಅರ್ಹ ವಸತಿ ರಹಿತರ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ 31.03.2025 ನಿಗದಿ ಪಡಿಸಲಾಗಿತ್ತು. ಆದರೆ, ಶೇ 100 ರಷ್ಟು ಅರ್ಹ ಫಲಾನುಭವಿಗಳ ಸಮೀಕ್ಷೆ ನಡೆಸಲು ರಾಜೀವ ಗಾಂಧಿ ವಸತಿ ನಿಗಮ ಸಮೀಕ್ಷೆ ಅವಧಿಯನ್ನು 30.04.2025ರ ವರೆಗೆ ವಿಸ್ತರಿಸಿದೆ. ಹೀಗಾಗಿ ಜಿ.ಪಂ, ತಾ.ಪಂ ಅಧಿಕಾರಿಗಳು ಹಾಗೂ ಪಿ.ಡಿ.ಓ ರವರು ಈ ಅವಧಿಯಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಿ ವಸತಿ ಮತ್ತು ನಿವೇಶನ ರಹಿತರಿಗೆ ಅನುಕೂಲ ಮಾಡಿ ಕೋಡಬೇಕು ಎಂದು ಶಾಸಕರು ಪತ್ರದಲ್ಲಿ ತಿಳಿಸಿದ್ದಾರೆ.

