ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗಾಳಿಯನ್ನು ಹೊರತುಪಡಿಸಿ ಮಿಕ್ಕೆಲ್ಲಾ ವಸ್ತುಗಳು ಕಾಂಗ್ರೇಸ್ ಸರ್ಕಾರ ಹೆಚ್ಚಿಸಿದೆ. ಜನರ ಕಷ್ಟವನ್ನು ಕಿಂಚಿತ್ತು ಅರ್ಥ ಮಾಡಿಕೊಳ್ಳಲು ಅಸಮರ್ಥವಾದ ಆಡಳಿತವನ್ನು ಸಿದ್ಧರಾಮಯ್ಯನ ಸರ್ಕಾರ ನೀಡುತ್ತಿದ್ದಾರೆ.
ಮತ ಕೊಟ್ಟು ಅಧಿಕಾರಕ್ಕೆ ತಂದ ಮತದಾರರಿಗೆ ವರವಾಗುವ ಬದಲು ಈ ಸರ್ಕಾರ ಶಾಪಗ್ರಸ್ಥವಾಗಿದೆ. ಹಾಲಿನ ದವರನ್ನು ರೂ. ೪ ಹೆಚ್ಚಳ ಮಾಡು೭ವವರೆಗೆ ಒಂದಾದ ಮೇಲೆ ಒಂದು ಪದಾರ್ಥಗಳ ಬೆಲೆಯನ್ನು ಕಿಂಚಿತ್ತು ಸಂವೇದನಾಶೀಲತೆಯಿಲ್ಲದ ಹೆಚ್ಚಳ ಮಾಡುತ್ತಿರುವುದು ಖಂಡನೀಯ. ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮಾರಣಾಂತಿಕ ಪೆಟ್ಟನ್ನು ನೀಡಿದ್ದಾರೆ. ವಿದ್ಯುತ್ ಇಲಾಖೆಯ ನೌಕರರಿಗೆ ಪಿಂಚಿಣಿ ಕೊಡಲು ಹಣವಿಲ್ಲದೆ ದಿವಾಳಿಯಾಗಿರುವ ಸರ್ಕಾರ ವಿದ್ಯುತ್ ಗ್ರಾಹಕರಿಂದ ಹಣ ಸುಲಿಗೆ ಮಾಡಿಕೊಡಲು ಮುಂದಾಗಿರುವುದು ನಾಚಿಗೇಡಿನ ಸಂಗತಿಯಾಗಿದೆ. ರಾಜ್ಯದ ಇತಿಹಾಸದಲ್ಲೇ ಕಂಡ ಅತ್ಯಂತ ಜನವಿರೋಧಿ ಸರ್ಕಾರವನ್ನು ಕಾಂಗ್ರೆಸ್ ನಡೆಸುತ್ತಿದೆ ಎಂದು ವಿಜಯಪುರ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕ ವಿಜಯ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

