ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನೋಂದಣಿ ಅವಧಿಯನ್ನು ಏಪ್ರಿಲ್ ೨೫ರ ವರೆಗೆ ಹಾಗೂ ಖರೀದಿ ಅವಧಿಯನ್ನು ಮೇ ೦೧ರವರೆಗೆ ವಿಸ್ತರಣೆ ಮಾಡಲಾಗಿದೆ.
೨೦೨೪-೨೫ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ೭,೫೫೦ ರೂ. ಜೊತೆಗೆ, ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಪ್ರತಿ ಕ್ವಿಂಟಾಲಿಗೆ ರೂ.೪೫೦ ಸೇರಿದಂತೆ ರೂ.೮,೦೦೦ ಪ್ರತಿ ಕ್ವಿಂಟಾಲಿಗೆ ನಿಗದಿಪಡಿಸಲಾಗಿದೆ. ಜಿಲ್ಲೆಯ ರೈತರು ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆಯ ಅಧ್ಯಕ್ಷರಾದ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
