ಉದಯರಶ್ಮಿ ದಿನಪತ್ರಿಕೆ
ಚಡಚಣ: ಸಮೀಪದ ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕು. ನಿಹಾಲ್ ಶ್ರೀಶೈಲ ಮಾಳಿ ಇವನು ೨೦೨೪-೨೫ ನೇ ಸಾಲಿನ ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದು ಜವಾಹರ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಕ್ಕಾಗಿ ಕು. ನಿಹಾಲ ಗೆ ಮಂಗಳವಾರ ಶಾಲಾ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

